ಹೈದರಾಬಾದ್: ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪಾ ರಾವ್ ಕೆಲ ದಿನಗಳ ರಜೆ ಬಳಿಕ ಮತ್ತೆ ಕಚೇರಿಗೆ ಮರಳಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ನಿಟ್ಟಿನಲ್ಲಿ ಕೆಲ ವಿದ್ಯಾರ್ಥಿಗಳು ಅಪ್ಪಾ ರಾವ್ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದು, 25 ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ವಿಶ್ವವಿದ್ಯಾಲಯದ ಅಧಿಕಾರಿಗಳು ಆವರಣದಲ್ಲಿ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಕೋರಿದ್ದಾರೆ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ ಎಂದು ಹೈದರಾಬಾದ್ ಜಂಟಿಪೊಲೀಸ್ ಮಹಾನಿರ್ದೇಶಕ ಶಶಿಧರ್ ರೆಡ್ಡಿ ಹೇಳಿದ್ದಾರೆ. ಅಲ್ಲದೇ ಮಾಧ್ಯಮ, ರಾಜಕೀvಯ ಪಕ್ಷಗಳು ಹಾಗೂ ಇತರ ವಿದ್ಯಾರ್ಥಿ ಸಂಘಟನೆಗಳು ಆವರಣ ಪ್ರವೇಶಿಸದಂತೆ ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಸಿಸದ್ದಾರೆ.
ಆವರಣದಲ್ಲಿ ಹಿಂಸಾಚಾರ ನಡೆದಿದ್ದು, ಮಾ.೨೭ರ ವರೆಗೆ ತರಗತಿಗಳನ್ನು ರದ್ದುಗೊಳಿಸಲಾಗಿದೆ.
ಅಪ್ಪಾ ರಾವ್ ಕಚೇರಿಗೆ ಮರಳಿರುವುದನ್ನು ವಿರೋಧಿಸಿ ಮಂಗಳವಾರ ಕೆಲ ವಿದ್ಯಾರ್ಥಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿ ಮಾಡಿದರಲಲ್ದೇ, ಕಪಾಟು ಮತ್ತಿತರ ವಸ್ತುಗಳನ್ನು ಹಾನಿಗೊಳಿಸಿ ಪ್ರತಿಭಟನೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.