ಕಲಬುರ್ಗಿ : ಕಲಬುರ್ಗಿ ಜಿಲ್ಲಾ ಆಸ್ಪತ್ರೆಯ ICUನಲ್ಲಿ ಎಸಿ ಸ್ಫೋಟಗೊಂಡ ಘಟನೆ ವರದಿಯಾಗಿದ್ದು, ಅದೃಪ್ಟವಶಾತ್ ಮಕ್ಕಳು ಜೀವಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲಾ ಆಸ್ಪತ್ರೆಯ NICU ನಲ್ಲಿ 30 ಶಿಶುಗಳಿದ್ದು ಜೀವಾಪಾಯಾದಿಂದ ಪಾರಾಗಿದ್ದಾರೆ. ಆದರೆ ಒಂದು ಮಗುವನ್ನು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ,ಆ ಮಗುವಿನ ಸ್ಥಿತಿ ಮೊದಲೇ ಗಂಭಿರವಾಗಿತ್ತು ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ .
ಅಲ್ಲದೇ ಸ್ಫೋಟಗೊಂಡ ತಕ್ಷಣ ಮಕ್ಕಳನ್ನು ನರ್ಸ್ಗಳು ಹೊರತಂದಿದ್ದು ಜೀವಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.