ಶ್ರೀನಗರ: ಪ್ರತ್ಯೇಕತಾವಾದಿ ಮಸರತ್ ಆಲಂನ ಬಂಧನವನ್ನು ಖಂಡಿಸಿ ಶ್ರೀನಗರದಲ್ಲಿ ಶುಕ್ರವಾರ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಮ್ಮು ಕಾಶ್ಮೀರ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸುತ್ತಿದ್ದಾರೆ, ಅಶ್ರುವಾಯು ಪ್ರಯೋಗ ಮಾಡುತ್ತಿದ್ದಾರೆ.
ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟವನ್ನು ನಡೆಸುತ್ತಿದ್ದಾರೆ, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ಕುರಿಯತ್ ಕಾನ್ಫರೆನ್ಸ್ ನಾಯಕ ಮಿರ್ವಾಝ್ ಉಮರ್ ಫಾರುಖ್ ವಹಿಸಿದ್ದು, ಆಲಂ ಬಂಧನ ಕಾನೂನು ಬಾಹಿರ ಎಂದು ಇವರು ವಾದಿಸುತ್ತಿದ್ದಾರೆ. ಅಲ್ಲದೇ ಸೇನೆಯ ಎನ್ ಕೌಂಟರ್ಗೆ ಇಬ್ಬರು ಯುವಕರು ಬಲಿಯಾದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ಥಾನ ಧ್ವಜವನ್ನು ಹಾರಿಸಿದ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇರೆಗೆ ಆಲಂನನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.