ನವದೆಹಲಿ: ಪಕ್ಷಬೇಧ ಮರೆತು ರಾಜ್ಯಸಭೆಯ ನಾಲ್ಕು ಸಂಸದರು ಎಚ್ಆರ್ಡಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸಮರ ಸಾರಿದ್ದಾರೆ. ವಿಶ್ವವಿದ್ಯಾನಿಲಯ ಮತ್ತು ಐಐಟಿಗಳ ಕಾರ್ಯನಿರ್ವಹಣೆಯಲ್ಲಿ ಸ್ಮೃತಿ ಮಧ್ಯ ಪ್ರವೇಶ ಮಾಡುತ್ತಿದ್ದಾರೆ ಎಂಬುದು ಇವರ ಆರೋಪವಾಗಿದೆ.
ಸಂಸದರಾದ ಕೆಸಿ ತ್ಯಾಗಿ, ಡಿ.ರಾಜಾ, ರಾಜೀವ್ ಶುಕ್ಲಾ ಮತ್ತು ಡಿಪಿ ತ್ರಿಪಾಠಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸುವಂತೆ ಕೇಳಿಕೊಂಡಿದ್ದಾರೆ.
ಇತ್ತೀಚಿಗಷ್ಟೇ ಸ್ಮೃತಿ ಇರಾನಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದ ಬಾಂಬೆ ಐಐಟಿಯ ಆಡಳಿತ ಗವರ್ನರ್ ಹಾಗೂ ಪರಮಾಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಐಐಟಿ ಕಾರ್ಯದಲ್ಲಿ ಸ್ಮೃತಿ ಮಧ್ಯಪ್ರವೇಶ ಮಾಡುತ್ತಿದ್ದಾರೆ ಎಂಬುದಾಗಿ ಇವರು ಆರೋಪಿಸಿದ್ದರು.
ಇದೀಗ ಸಂಸದರು ಸ್ಮೃತಿ ಇರಾನಿ ವಿರುದ್ಧ ಸಮರ ಸಾರಿದ್ದಾರೆ, ರಾಷ್ಟ್ರಪತಿಗಳು ಈ ಬಗ್ಗೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.