ಕೋಲ್ಕತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೋಲ್ಕತ್ತಾದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ’ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಪಶ್ಚಿಮಬಂಗಾಳದಲ್ಲಿ ಕಾರ್ಖಾನೆಗಳು ಸ್ಥಾಪನೆಗೊಂಡಿವೆ, ಆದರೆ ಅದು ಬಾಂಬ್ ತಯಾರಕಾ ಕಾರ್ಖಾನೆಗಳೇ ಹೊರತು ಕೈಗಾರಿಕೆಗಳಲ್ಲ’ ಎಂದು ಛೇಡಿಸಿದ್ದಾರೆ.
ಅಲ್ಲದೇ ಬಿಜೆಪಿ ತೃಣಮೂಲ ಕಾಂಗ್ರೆಸ್ ಜೊತೆಯಾಗಲಿ, ಎಡಪಕ್ಷಗಳ ಜೊತೆಯಾಗಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಅವರು ಈ ವೇಳೆ ಸ್ಪಷ್ಟಪಡಿಸಿದ್ದಾರೆ.
ಮಮತಾರೊಂದಿಗೆಯಾಗಲಿ, ಎಡಪಂಥೀಯರೊಂದಿಗೆ ಆಗಲಿ ನಾವು ಕೈಜೋಡಿಸುವುದಿಲ್ಲ, ಯಾಕೆಂದರೆ ನಾವೆಂದೂ ಒಳನುಸುಳುವಿಕೆ ಮತ್ತು ಭ್ರಷ್ಟಾಚಾರದ ಪರ ನಿಲ್ಲುವುದಿಲ್ಲ ಎಂದಿದ್ದಾರೆ.
ಪಶ್ಚಿಬಂಗಾಳದಲ್ಲಿ ಈ ಬಾರಿ ತೃಣಮೂಲ, ಕಾಂಗ್ರೆಸ್-ಸಿಪಿಎಂ, ಬಿಜೆಪಿ ಹೀಗೆ ಮೂರು ವಿಧದ ಜಾಟಾಪಟಿ ನಡೆಯಲಿದೆ. ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಒಟ್ಟು ಆರು ಹಂತದಲ್ಲಿ ಇಲ್ಲಿ ಚುನಾವಣೆ ನಡೆಯಲಿದೆ. ಫಲಿತಾಂಶ ಮೇ.19 ಕ್ಕೆ ಘೋಷಣೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.