ಭೋಪಾಲ್: ಬುಂದೇಲ್ಖಂಡ್ ಪ್ರದೇಶ ಬರದಿಂದ ತತ್ತರಿಸುತ್ತಿದ್ದರೆ ಅಲ್ಲಿಯ ಶಾಸಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವಂತೆ ಕಾಣುತ್ತಿಲ್ಲ. ಮಧ್ಯಪ್ರದೇಶ ಸಂಪುಟವು ಅಲ್ಲಿನ ಶಾಸಕರ ಸಂಬಳ ಹೆಚ್ಚಿಸಲು ಒಪ್ಪಿಗೆ ನೀಡಿದೆ.
ಈ ಏರಿಕೆಯೊಂದಿಗೆ ಶಾಸಕರ ಸಂಬಳ ಪ್ರಸ್ತುತ ತಿಂಗಳಿಗೆ 71,000ದಿಂದ 1.10 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಯವರ ತಿಂಗಳಿಗೆ 1.43 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಇದರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ ತೆಲಂಗಾಣ ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು, ಶಾಸಕರು, ವಿಧಾನ ಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸಂಬಳ ಹೆಚ್ಚಿಸಿ ಮಸೂದೆ ಜಾರಿಗೊಳಿಸಿತ್ತು.
ಇತ್ತೀಚೆಗೆ ಆಂಧ್ರಪ್ರದೇಶ ಶಾಸನ ಸಭೆ ಕೂಡ ಶಾಸಕರ ಸಂಬಳವನ್ನು ತಿಂಗಳಿಗೆ 2 ಲಕ್ಷಕ್ಕೆ ಏರಿಸುವಂತೆ ಕೋರಿ ಪ್ರಸ್ತಾಪವನ್ನು ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.