ನವದೆಹಲಿ: ಕೇಂದ್ರದ ಎನ್ಡಿಎ ಸರ್ಕಾರ ಭಾರತ-ಬಾಂಗ್ಲಾದೇಶ ನಡುವಿನ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಿದ್ದು, ಬಾಂಗ್ಲಾ ಒಳನುಸುಳುವವರನ್ನು ನಿಲ್ಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ಅಸ್ಸಾಂನಲ್ಲಿ ಬಾಂಗ್ಲಾ ಒಳನುಸುಳುಕೋರರನ್ನು ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶಿಗರು ಅಕ್ರಮವಾಗಿ ಭಾರತದೊಳಕ್ಕೆ ನುಸುಳುತ್ತಿದ್ದಾರೆ. ಭಾರತ-ಬಾಂಗ್ಲಾ ಗಡಿ ಮುಚ್ಚುವ ಮೂಲಕ ಇವರನ್ನು ತಡೆಯಲು ಕಾಂಗ್ರೆಸ್ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
ಸರ್ಕಾರ ಭಾರತ-ಬಾಂಗ್ಲಾದೇಶ ನಡುವಿನ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಿದೆ. ಈ ಮೂಲಕ ಬಾಂಗ್ಲಾ ಒಳನುಸುಳುಕೋರರನ್ನು ತಡೆಯಲಿದೆ. ಇದಕ್ಕೆ ಸ್ವಲ್ಪ ಕಾಲಾವಕಾಶದ ಅಗತ್ಯವಿದೆ ಎಂದು ಗೃಹ ಸಚಿವರು ಅವರು ಹೇಳಿದ್ದಾರೆ.
ಅವರು ಅಸ್ಸಾಂನಲ್ಲಿ ಮೂರು ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿದ್ದು, ಗುರುವಾರ ಪಶ್ಚಿಮ ಬಂಗಾಳದಲ್ಲಿ ಎರಡು ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.