ಬೆಂಗಳೂರು : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪಶ್ನೆಪತ್ರಿಕೆ ಮತ್ತೊಮ್ಮೆ ಸೋರಿಕೆಯಾಗಿದ್ದು, ಇಂದು ನಡೆಯಬೇಕಿದ್ದ ಮರುಪರೀಕ್ಷೆ ರದ್ದುಗೊಂಡಿದೆ.
ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಕೈಯಲ್ಲಿ ಬರೆದಿರುವ 30 ಪ್ರಶ್ನೆಗಳು ವ್ಯಾಟ್ಸಾಪ್ ನಲ್ಲಿ ಹರಿದಾಡಿದ್ದು, 3.30 ರ ವೇಳೆಗೆ ಪಿ.ಯು. ಪರೀಕ್ಷಾ ಮಂಡಳಿಗೆ ಈ ವಿಷಯ ತಿಳಿದಿದ್ದು, ಪರೀಕ್ಷೆಯನ್ನು ರದ್ದು ಮಾಡಿ, ಪ್ರಶ್ನೆ ಪತ್ರಿಕೆಗಳನ್ನು ಹೊರತೆಗೆಯದಂತೆ ಜಿಲ್ಲಾ ಕೇಂದ್ರಗಳಿಗೆ ಸೂಚನೆ ರವಾನಿಸಿತು.
ಪಿಯು ಬೋರ್ಡಿಗೆ ಸಚಿವ ಕಿಮ್ಮನೆ ರತ್ನಾರಕ್ ಅವರು ಬೆಳಗ್ಗೆ ಆಗಮಿಸಿದ್ದು, ಕೆಲ ಸಮಯ ಅಧಿಕಾರಿಗಳೊಂದಿಗೆ ಮಾತನಾಡಿ ಹೋಗಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಮತ್ತೊಮ್ಮೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಇಂದು ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ !
ಈ ರೀತಿ ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಲು ಯಾರು ಕಾರಣ ? ಶಿಕ್ಷಣ ಇಲಾಖೆ ಈ ವಿಷಯದಲ್ಲಿ ಇಷ್ಟೇಕೆ ನಿರ್ಲಕ್ಷ್ಯ ತೋರಿಸುತ್ತಿದೆ ಎನ್ನುವುದು ನಿಜಕ್ಕೂ ಅರ್ಥವಾಗದ ವಿಚಾರ.
ಈಗಾಗಲೇ ವಿದ್ಯಾರ್ಥಿಗಳು ಸಿಇಟಿ, ಜೆಇ ಪರೀಕ್ಷೆಗಳಿಗೆ ತಯಾರಾಗಬೇಕಿದೆ. ಈ ಮಧ್ಯೆ ಈ ರೀತಿ ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆ ನಿಜಕ್ಕೂ ಮಕ್ಕಳ ಮಾನಸಿಕ ಸ್ಥೈರ್ಯವನ್ನು ಕುಂದುವಂತೆ ಮಾಡಿದ್ದು, ವಿದ್ಯಾರ್ಥಿಗಳಲ್ಲಿ ರೋಷ ಹೆಚ್ಚಿಸುವಂತೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.