ನವದೆಹಲಿ: ಎರಡು ತಿಂಗಳ ಅಜ್ಞಾತ ವಾಸದಿಂದ ವಾಪಾಸ್ಸಾಗಿರುವ ರಾಹುಲ್ ಗಾಂಧಿ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಶನಿವಾರ ಅವರು ದೇಶದ ವಿವಿಧ ಭಾಗಗಳಿಂದ ಆಗಮಿಸುವ ರೈತರ ನಿಯೋಗದೊಂದಿಗೆ ಅವರಿಂದು ಮಾತುಕತೆ ನಡೆಸಲಿದ್ದಾರೆ.
ಕೇಂದ್ರದ ಭೂಸ್ವಾಧೀನ ಮಸೂದೆಯ ಪರಿಣಾಮಗಳ ಬಗ್ಗೆ ಅವರು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಮಧ್ಯಪ್ರದೇಶದಿಂದ ಆಗಮಿಸುವ ರೈತ ನಿಯೋಗದೊಂದಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಅವರು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಳೆ ಅವರ ನೇತೃತ್ವದಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರೈತ ಸಮಾವೇಶ ಏರ್ಪಡಿಸಲಾಗಿದೆ. ಭೂಸ್ವಾಧೀನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿರುವ ಸರ್ಕಾರದ ವಿರುದ್ಧ ರೈತರನ್ನು ಸಂಘಟಿಸುವ ಯೋಜನೆ ಇದು ಎಂದು ವಿಶ್ಲೇಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.