ನವದೆಹಲಿ: ಪಠಾನ್ಕೋಟ್ ವಾಯುನೆಲೆಯ ಮೇಲಿನ ದಾಳಿಯ ಬಗ್ಗೆ ತನಿಖೆ ನಡೆಸಲು ಭಾರತಕ್ಕೆ ಆಗಮಿಸಿರುವ ಪಾಕಿಸ್ಥಾನದ ತನಿಖಾ ತಂಡ ಅಜ್ಮೇರ್ ದರ್ಗಾಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಮತ್ತು ತಾಜ್ ಮಹಲ್ಗೆ ಭೇಟಿ ಕೊಡಲು ಬಯಸಿದೆ.
ಇದಕ್ಕಾಗಿ ತಮ್ಮ ವೀಸಾದ ಅವಧಿಯನ್ನು ಇನ್ನಷ್ಟು ದಿನಗಳ ಕಾಲ ಮುಂದೂಡುವಂತೆ ಈ ತನಿಖಾ ತಂಡ ಭಾರತ ಸರ್ಕಾರವನ್ನು ಕೇಳಿಕೊಂಡಿದೆ.
ಆದರೆ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ವೀಸಾ ಅವಧಿ ವಿಸ್ತರಣೆಯ ಬೇಡಿಕೆಯನ್ನು ಪುರಸ್ಕರಿಸದಿರಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.