ಹೈದರಾಬಾದ್; ನೀರಾವರಿ ಯೋಜನೆಯ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ವಿಧಾನಸಭೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ.
ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷದ ಸದಸ್ಯರು ಸದನವನ್ನು ಬಹಿಷ್ಕರಿಸಿ ಹೊರ ನಡೆದಿದ್ದರೂ ರಾವ್ ಅವರು ಪಿಪಿಟಿ ಮೂಲಕ ಯೋಜನೆಯ ವಿಸ್ತೃತ ವಿವರಣೆಯನ್ನು ನೀಡಿದ್ದಾರೆ.
ಪ್ರೆಸೆಂಟೇಶನ್ಗಾಗಿ ಅಸೆಂಬ್ಲಿಯಲ್ಲಿ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು, ಇನ್ನೊಂದು ಸ್ಕ್ರೀನ್ನನ್ನು ವಿಧಾನ ಪರಿಷತ್ನಲ್ಲೂ ಅಳವಡಿಸಲಾಗಿತ್ತು.
ಮುಖ್ಯಮಂತ್ರಿಯೊಬ್ಬರು ಅಸೆಂಬ್ಲಿಯಲ್ಲಿ ಪಿಪಿಟಿ ಮೂಲಕ ಯೋಜನೆಯ ವಿವರಣೆ ನೀಡುವುದು ಇದೇ ಮೊದಲ ಬಾರಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.