ಬಂಟ್ವಾಳ : ಅರಳ ಕಲ್ಲೇರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ.13ಲಕ್ಷ ವೆಚ್ಚದಲ್ಲಿ 2 ಕೊಠಡಿಯ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು.
ಮಂಗಳೂರು ಯೋಜನಾ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಯಾನಂದ ಪೂಜಾರಿ , ಸಹಾಯಕ ಇಂಜಿನಿಯರ್ ಸೂರ್ಯನಾರಾಯಣ , ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾ.ಪಂ.ಸದಸ್ಯ ಎಫ್ರೆಂಸಿಕ್ವೇರಾ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಶಿವಪ್ರಸನ್ನ ಡಿ.ಎಂ. , ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪದ್ಮರಾಜ್ ಬಳ್ಳಾಲ್ , ಅರಳ ಗ್ರಾ.ಪಂ.ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ , ಅಶ್ರಫ್ ಎಂ.ಬಿ, ಡೊಂಬಯ ಬಿ., ಮಹಮ್ಮದ್ ಹನೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಕುಟ್ಟಿಕಳ , ಎಸ್.ಡಿ.ಎಂ.ಸಿ.ಅಧ್ಯಕ್ಷ ಖಾಲಿದ್ , ಪ್ರಮುಖರಾದ ಜಗದೀಶ್ ಕೊಯಿಲ, ನಿರಂಜನ್ ಹೆಗಡೆ , ದಿವಾಕರ ಶೆಟ್ಟಿ ,ರಾಜೇಂದ್ರ ಶೆಟ್ಟಿ, ವಿಶ್ವನಾಥ ಕಲ್ಲೇರಿ , ಗುಣಪಾಲ ಶೆಟ್ಟಿ ಮುಖ್ಯ ಶಿಕ್ಷಕಿ ಗಿರಿಜಾ ,ಕೃಷ್ಣವೇಣಿ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.