ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಳೈಓವರ್ ಕುಸಿತದಿಂದಾಗಿ ಸಾವಿಗೀಡಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಇಡೀ ರಾತ್ರಿಯೂ ಕಾರ್ಯಾಚರಣೆ ನಡೆಸಲಾಗಿದ್ದು, 10 ಎನ್ಡಿಆರ್ಎಫ್ ತಂಡಗಳು ಕಾರ್ಯನಿರತವಾಗಿದೆ. ಸದ್ಯಕ್ಕೆ ರಕ್ಷಣಾ ಕಾರ್ಯ ಕೊನೆಯ ಹಂತ ತಲುಪಿದೆ.
ಅವಶೇಷಗಳಡಿ ಜೀವಂತವಾಗಿರುವವರು ಇರುವುದು ಇನ್ನು ಕಷ್ಟಸಾಧ್ಯ, ಹೀಗಾಗಿ ಮೃತದೇಹಗಳನ್ನು ಹೊರ ತೆಗೆಯುವತ್ತ ಮತ್ತು ಅವಶೇಷಗಳನ್ನು ತೆರವುಗೊಳಿಸುವತ್ತ ಹೆಚ್ಚಿನ ಗಮನವಹಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಿರ್ಮಾಣ ಕಾರ್ಯದ ಗುತ್ತಿಗೆ ಹೊತ್ತುಕೊಂಡಿದ್ದ ಹೈದರಾಬಾದ್ ಮೂಲದ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಎಂ ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ. ಈ ಅವಘಡ ದೇವರ ಶಾಪ ಎಂದು ಈ ಕಂಪನಿ ಮಾಲೀಕ ಹೇಳಿದ್ದ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.