ಜಮ್ಮು: ತನಗೆ ನೀಡಲಾಗಿರುವ ಖಾತೆಯಿಂದ ಬೇಸರಗೊಂಡಿರುವ ಜಮ್ಮು ಕಾಶ್ಮೀರದ ನೂತನ ಸಚಿವ ಸಜ್ಜದ್ ಘನಿ ಲೋನ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ಗೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪ್ರತ್ಯೇಕತಾವಾದಿಯಾಗಿದ್ದ ಸಜ್ಜದ್ ಲೋನ್ ಬಳಿಕ ತನ್ನ ಧೋರಣೆಯನ್ನು ಬದಲಾಯಿಸಿಕೊಂಡು ರಾಜಕಾರಣಿಯಾಗಿದ್ದರು. ಇವರು ಪೀಪಲ್ಸ್ ಕಾನ್ಫರೆನ್ಸ್ನ ಮುಖ್ಯಸ್ಥ. 2014ರಲ್ಲಿ ಹಂಡ್ವಾರ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬಂದಿದ್ದು, ಬಳಿಕ ಬಿಜೆಪಿಗೆ ಬೆಂಬಲ ಘೋಷಿಸಿದ್ದರು.
10 ತಿಂಗಳ ಮುಫ್ತಿ ಮೊಹಮ್ಮದ್ ಸೈಯದ್ ಸರ್ಕಾರದಲ್ಲಿ ಸಂಪುಟ ಸಚಿವರೂ ಆಗಿದ್ದರು.
ಇದೀಗ ಮೆಹಬೂಬ ಸರ್ಕಾರದಲ್ಲಿ ಇವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ, ಆದರೆ ಆರೋಗ್ಯ ಖಾತೆ ಪಡೆಯುವ ಆಕಾಂಕ್ಷೆ ಇವರದಾಗಿತ್ತು ಎನ್ನಲಾಗಿದೆ. ಹೀಗಾಗಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.