ಬೆಂಗಳೂರು : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ಕಿಂಗ್ ಪಿನ್ ಶಿವಕುಮಾರ್ ತಲೆ ಮರೆಸಿಕೊಂಡಿದ್ದು ಆತನ ಶೋಧಕ್ಕಾಗಿ ಸಿಐಡಿ ಬಲೆಬೀಸಿದೆ.
ಶಿವಕುಮಾರ್ ಈ ಹಿಂದೆ ಆಂಧ್ರದಲ್ಲಿದ್ದು ಈಗ ಕೇರಳಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ದೂರವಾಣಿ ಕರೆಗಳಿಂದ ಪತ್ತೆಹಚ್ಚಲಾಗಿದೆ. ಶಿವಕುಮಾರ್ ಸತತ ಆರು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೊರಿಕೆಯಲ್ಲಿ ತೊಡಗಿದ್ದಾನೆ ಎನ್ನಲಾಗುತ್ತಿದ್ದು, ಕೇವಲ ಪಿಯುಸಿ ಮಾತ್ರವಲ್ಲ ಸಿಇಟಿ ಮತ್ತು ಎಸ್ ಎಸ್ ಎಲ್ ಸಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿಮಾಡುವಲ್ಲಿ ಈತನ ಕೈವಾಡವಿದೆ ಎನ್ನಲಾಗುತ್ತಿದೆ. ಸಿಐಡಿ ನಾಲ್ಕು ತಂಡಗಳನ್ನು ರಚಿಸಿ ತನಿಖೆಯನ್ನು ತೀವ್ರಗೊಳಿಸಿದೆ.
ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಓಬಳ್ ರಾಜು, ಕೆಂಬ್ರಿಡ್ಜ್ ಶಾಲೆಯ ದೈಹಿಕ ಶಿಕ್ಷಕ ಮಂಜುನಾಥ ಮತ್ತು ಪಿಡಬ್ಲ್ಯುಡಿ ಅಧಿಕಾರಿ ರುದ್ರಪ್ಪ ಈ ಮೂವರು ಆರೋಪಿಗಳನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿ, ಸಿಐಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ 13 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.