ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವೇತನ ತಾರತಮ್ಯ ಹಾಗೂ ಕಾಲ್ಪನಿಕ ವೇತನ ಸಮಸ್ಯೆಯ ಪರಿಹಾರಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ ಸರ್ಕಾರವನ್ನು ಅನೇಕ ಬಾರಿ ವಿನಂತಿಸಿಕೊಂಡಿದ್ದರೂ ಸೂಕ್ತ ಸ್ಪಂದನೆ ದೊರೆಯದಿರುವ ಹಿನ್ನಲೆಯಲ್ಲಿ ಅತ್ಯಂತ ನಿರಾಶರಾಗಿ ಬೇರೆ ಯಾವುದೇ ಮಾರ್ಗವಿಲ್ಲದೆ ಮೌಲ್ಯಮಾಪನ ಬಹಿಷ್ಕಾರ ರೂಪದ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದ್ದಾರೆ.
ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ನ್ಯಾಯೋಚಿತ ಬೇಡಿಕೆಗಳಿಗಾಗಿ ಅವರು ಶಾಂತಿಯುತವಾಗಿ ನಡೆಸುತ್ತಿರುವ ಮುಷ್ಕರಕ್ಕೆ ನನ್ನ ಪೂರ್ಣ ಬೆಂಬಲವಿದೆ.
ಶಿಕ್ಷಕರು ಮುಷ್ಕರ ನಡೆಸುತ್ತಾ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಾರೆಂದು ಸಾರ್ವಜನಿಕರನ್ನು ದಿಕ್ಕು ತಪ್ಪಿಸದೆ, ಶಿಕ್ಷಕರನ್ನು ಭಾವನಾತ್ಮಕವಾಗಿ ಶೋಷಿಸದೆ ಅವರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣವೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.