ನವದೆಹಲಿ: ಪೆಟ್ರೋಲಿಯಂ ಸಚಿವಾಲಯದ ಮಹತ್ವದ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 13 ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಶನಿವಾರ ದೆಹಲಿ ಅಪರಾಧ ವಿಭಾಗದ ಪೊಲೀಸರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಕಾಶ್ ಜೈನ್ ಅವರಿಗೆ 44 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದರು.
ಮೂಲಗಳ ಪ್ರಕಾರ ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆಯ 457 (ಅಕ್ರಮ ಪ್ರವೇಶ), 380 (ಕಳವು), 420 (ವಂಚನೆ), 468 (ವಂಚನೆ ಉದ್ದೇಶಕ್ಕಾಗಿ ನಕಲಿ), 471 (ನಕಲಿ ದಾಖಲೆಗಳನ್ನು ನೈಜ ದಾಖಲೆಗಳೆಂದು ಬಳಸುವುದು), 120-ಬಿ (ಅಪರಾಧ ಪಿತೂರಿ) ಹಾಗೂ 34 (ಸಾಮಾನ್ಯ ಉದ್ದೇಶ) ಕಲಂಗಳಡಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಂಜಯ್ ಖನಗ್ವಾಲ್ ಅವರು ಶನಿವಾರ ರಜೆಯ ಮೇಲಿದ್ದ ಕಾರಣ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 20ಕ್ಕೆ ನಿಗದಿಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.