ಬೆಂಗಳೂರು : ಪಿಯು ಪರೀಕ್ಷಾ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರಕಾರ ಪ್ರತಿಭಟನಾ ನಿರತ ಶಿಕ್ಷಕರ ಜೊತೆ ಮಾತುಕತೆ ನಡೆಸಲಿದ್ದು, ತಮ್ಮ ನಿರ್ಧಾರವನ್ನು ಸಂಜೆ ಪ್ರಕಟಿಸಲಿದ್ದೇವೆ ಎಂದು ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ನಾಳೆಯೊಳಗೆ ಶಿಕ್ಷಕರು ಮೌಲ್ಯಮಾಪನಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುಸು ಎಂದು ಅವರು ತಿಳಿಸಿದ್ದಾರೆ.
ಸರಕಾರ ಮೌಲ್ಯಮಾಪನಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಖಾಸಗೀ ಶಾಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಕೇವಲ 12 ದಿನಗಳಲ್ಲಿ ಮೌಲ್ಯ ಮಾಪನ ಮುಗಿಯಲಿದೆ. ಮೇ ಅಂತ್ಯದೊಳಗೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.