ಬೆಂಗಳೂರು : ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಮಾಜಿ ಅಧ್ಯಕ್ಷರಾದ ಪ್ರಹ್ಲಾದ ಜೋಷಿಯವರು ಪಕ್ಷದ ಧ್ವಜವನ್ನು ಬಿ.ಎಸ್.ಯಡಿಯೂರಪ್ಪರವರಿಗೆ ನೀಡುವ ಮೂಲಕ ನೂತನ ರಾಜ್ಯಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇಂದು ಸಂಜೆ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಯಡಿಯೂರಪ್ಪ ಅವರು ಭಾಷಣ ಮಾಡಲಿದ್ದು, ಇದರಲ್ಲಿ ಕೇಂದ್ರದ ರಾಜ್ಯ ನಾಯಕರು ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಭಾಗವಹಿಸಲಿದ್ದಾರೆ.
ಯಡಿಯೂರಪ್ಪನವರು ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಅಧಿಕಾರ ವಹಿಸಿದ್ದು, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಹೊಣೆ ಅವರ ಮೇಲಿದೆ. ಪಕ್ಷವನ್ನು ಮುನ್ನಡೆಸಲು ಅನೇಕ ಸವಾಲುಗಳೂ ಅವರ ಎದುರಿದೆ.
ಅಲ್ಲದೇ ರಾಜ್ಯ ಸರಕಾರದ ವೈಫಲ್ಯ ಮತ್ತು ರಾಜ್ಯದ ವಿರೋಧ ಪಕ್ಷವಾದ ಬಿಜೆಪಿಯನ್ನು ಜನ ಸಾಮಾನ್ಯರ ದನಿಯಾಗಿಸುವ ಕೆಲಸ ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ಅವರ ಮೇಲಿದೆ ಎಂದು ರಾಜಕೀಯ ವಿಶ್ಲೇಷಕರ ಅಂಬೋಣ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.