ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎಂ, ಭಟ್ ಅವರು, ಕಾರ್ಮಿಕರ ಪರವಾಗಿರಬೇಕಾದ ಕಾನೂನುಗಳನ್ನು ಮಾಲಕರ ಪರವಾಗಿ ತಿದ್ದುಪಡಿಗಳನ್ನು ತಂದು ಕೇಂದ್ರ ಸರಕಾರ ಕಾರ್ಮಿಕರನ್ನು ಬೀದಿಗೆ ತಳ್ಳಲು ಮುಂದಾಗಿದೆ. ನೂತನ ಇಪಿಎಫ್ ಕಾನೂನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಬೀಡಿ ಕಾಮಿಕರು ಕೆಲಸವಿಲ್ಲದೆ ಬೀದಿಗೆ ಬೀಳುವ ಸ್ಥಿತಿಯಲ್ಲಿದ್ದು ಅವರ ರಕ್ಷಣೆಗೆ ಸರಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ತಾಲೂಕು ಕಾರ್ಯದರ್ಶಿ ವಸಂತ ನಡ ಮಾತನಾಡಿ, ಹೋರಾಟಕ್ಕೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು. ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯು ಮುಖಂಡರುಗಳಾದ ಲೋಕೇಶ್ ಕುದ್ಯಾಡಿ, ದೇವಕಿ, ಜಯರಾಮ್ ಮಯ್ಯ, ನೆಬಿಸ, ಜಯಶ್ರೀ, ಸೌಮ್ಯ, ಗಾಯತ್ರಿದೇವಿ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಭಟನಾಕಾರರು ಪ್ರತಿಭಟನೆಯ ಬಳಿಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.