ಸುಳ್ಯ: ತಾಲೂಕಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾಪನಗೊಂಡಿತು.
ವಿದ್ಯಾರ್ಥಿನಿ ಮಹಾಲಕ್ಷ್ಮಿ ಉಪ್ಪಿನಕುದ್ರು ಸಮಾರೋಪ ಭಾಷಣ ಮಾಡಿ ‘ಆಧುನಿಕತೆಯ ಪ್ರಭಾವಕ್ಕೆ ಸಿಲುಕಿ ಇಂದು ಮಕ್ಕಳ ಮುಗ್ಧತೆ ಮಾಯವಾಗುತ್ತಿದೆ. ಮಕ್ಕಳ ಮೇಲೆ ಉಂಟಾಗುತ್ತಿರುವ ಆಧುನಿಕತೆಯ ಪ್ರಭಾವ ಆತಂಕವನ್ನು ಹುಟ್ಟಿಸುತ್ತದೆ ಎಂದು ಹೇಳಿದರು. ಮಾನಸಿಕ ಸ್ಥೈರ್ಯ ದೈಹಿಕ ಸಾಮರ್ಥ್ಯಕ್ಕಿಂತ ಮಿಗಿಲಾದುದು. ಅಂಥಹ ಆತ್ಮ ಸ್ಥೈರ್ಯ ಬರುವುದು ಬಾಲ್ಯದಲ್ಲಿ. ರಂಗಮನೆಯ ಚಿಣ್ಣರ ಮೇಳದಂತಹ ಶಿಬಿರಗಳು ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಮಹಾಲಕ್ಷ್ಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅಂಕಣಕಾರ ನಾ.ಕಾರಂತ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಜಯಶ್ರೀ. ಕೆ., ಮಕ್ಕಳ ತಜ್ಞ ಡಾ.ಶ್ರೀಕೃಷ್ಣ ಭಟ್, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡಿತ್ತಾಯ, ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ ಮುಖ್ಯ ಅತಿಥಿಗಳಾಗಿದ್ದರು.
ರಂಗಮನೆಯ ನಿರ್ದೇಶಕ ಜೀವನ್ರಾಮ್ ಸ್ವಾಗತಿಸಿದರು. ಡಾ.ವೀಣಾ ನಿರೂಪಿಸಿದರು.
ಸಮಾರೋಪ ಸಮಾರಂಭಕ್ಕಿಂತ ಮುನ್ನ ಶಿಬಿರದಲ್ಲಿ ಮಕ್ಕಳೇ ರಚಿಸಿ, ನಿರ್ದೇಶಿಸಿ ಅಭಿನಯಿಸಿದ ನಾಟಕಗಳ ಪ್ರದರ್ಶನ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.