ಕಾರ್ಕಳ: ಸಾಣೂರು-ಕುಂಟಲ್ಪಾಡಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಕಾಂಗ್ರೆಸ್ ನಾಯಕರು ಶನಿವಾರ ವೀಕ್ಷಿಸಿದರು.
2013-14ರ ಅವಧಿಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಅಂದಿನ ಉಡುಪಿ ಚಿಕ್ಕಮಗಳೂರು ಲೋಕಸಭೆ ಸಂಸದ ಕೆ. ಜಯಪ್ರಕಾಶ್ ಹೆಗ್ಡೆಯವರ ಅವಧಿಯಲ್ಲಿ ಬಿಡುಗಡೆಗೊಳಿಸಿದ್ದು, ರೂ. 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಸಾಣೂರಿನಿಂದ ಕುಂಟಲ್ಪಾಡಿಗೆ ಸಂಪರ್ಕ ಕಲ್ಪಿಸುವ 3.5 ಕಿಮಿ ಉದ್ದದ, ಸಮಗ್ರವಾಗಿ ಅಭಿವೃದ್ಧಿಗೊಂಡು ನಿರ್ಮಾಣವಾದ ನೂತನ ರಸ್ತೆಯನ್ನು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ವೀಕ್ಷಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಎನ್. ಕೋಟ್ಯಾನ್, ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ ಡಾ.ಸಂತೋಷ ಕುಮಾರ್ ಶೆಟ್ಟಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆವೆಲಿನ್ ಆರ್. ಲೂಯಿಸ್, ತಾ.ಪಂ. ಸದಸ್ಯ ಕ್ಸೇವಿಯರ್ ಡಿಮೆಲ್ಲೋ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಲಿನಿ ಎನ್. ರೈ, ಪುರಸಭಾ ಅಧ್ಯಕ್ಷೆ ರೆಹಮತ್, ಮುದಲ್ಕಡಿ ಜಗದೀಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.