ಬೆಂಗಳೂರು : 2017 ರಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಮತ್ತು ಕಾರ್ಯಕ್ರಮವನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಉದ್ಘಾಟಿಸಲಿದ್ದಾರೆ ಎಂದು ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಈ ಬಾರಿ ಪ್ರವಾಸಿ ಭಾರತೀಯ ದಿವಸ್ ಅನ್ನು ರಾಜ್ಯದಲ್ಲಿ ಆಚರಿಸಲು ಕೇಂದ್ರ ಸರಕಾರದ ಬಳಿ ರಾಜ್ಯ ಸರಕಾರ ಕೇಳಿಕೊಂಡಿದ್ದು ಇದಕ್ಕೆ ಕೇಂದ್ರ ಸರಕಾರ ಒಪ್ಪಿಗೆಯನ್ನು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.
2017 ರ ಜನವರಿ 7 ರಿಂದ 9 ರ ತನಕ ಪ್ರವಾಸಿ ಭಾರತೀಯ ದಿವಸ್ ನಡೆಯಲಿದೆ. ಸಾಂಸ್ಕೃತಿಕ ಮತ್ತು ಪ್ರಧಾನಿಯೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸಲು ಚಿಂತನೆ ನಡೆಸುತ್ತಿದೆ. ಮಾತ್ರವಲ್ಲ ಈ ಕಾರ್ಯಕ್ರಮದ ಮೂಲಕ ಕರ್ನಾಟಕ ಸೇರಿದಂತೆ ಇತರ ಎಲ್ಲಾ ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ಈ ಕಾರ್ಯಕ್ರಮ ಸಹಕಾರಿಯಾಗಲಿದೆ.
ಈ ಬಾರಿ ಬಂಡವಾಳ ಹೂಡಿಕೆ ಕಾರ್ಯಕ್ರಮವನ್ನು ರೂಪಿಸಿ ರಾಜ್ಯ ಸರಕಾರ ಯಶಸ್ವಿಯಾಗಿದ್ದು, ಇದು ಇನ್ನೊಂದು ದೊಡ್ಡ ಕಾರ್ಯಕ್ರಮವಾಗಿ ಮೂಡಿಬರಲಿದೆ ಎನ್ನಲಾಗಿದೆ.
ಪ್ರವಾಸಿ ಭಾರತೀಯ ದಿವಸ್ ಅನ್ನು ಗಾಂಧೀಜಿ ವಿದೇಶದಿಂದ ಮರಳಿ ಬಂದ ನೆನಪಿಗಾಗಿ ಕೇಂದ್ರ ಸರಕಾರ ರಚಿಸಿದ ಕಾರ್ಯಕ್ರಮವಾಗಿದೆ. ಈ ಮೂಲಕ ಕೇಂದ್ರ ಸರಕಾರ ಅನಿವಾಸಿ ಭಾರತಿಯರನ್ನು ದೇಶದ ಅಭಿವೃದ್ಧಿಯಲ್ಲಿ ಪಾತ್ರ ವಹಿಸುವಲ್ಲಿ ಕೊಂಡಿಯಾಗಲು ಈ ಕಾರ್ಯಕ್ರಮ ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.