ಬೀದರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರ ಬರ ಅಧ್ಯಯನ ಪ್ರವಾಸ ಪ್ರಾರಂಭವಾಗಿದ್ದು, ಬೀದರ್ನಿಂದ ಪ್ರವಾಸ ಆರಂಭಿಸಿದ್ದಾರೆ.
ಇಂದು ಬೀದರ್ನಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಸಿಎಂ ತರಾತುರಿಯಲ್ಲಿ ಬರವೀಕ್ಷಣೆ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ರಾಜ್ಯದಲ್ಲಿ ಬರವೇ ಇಲ್ಲ ಎಂಬ ರೀತಿ ಮಾತನಾಡುತ್ತಿದ್ದಾರೆ. ಆದರೆ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರಾಕೃತಿಕ ವಿಕೋಪಗಳನ್ನು ನಿರ್ವಹಣೆ ಮಾಡುವಲ್ಲಿ ಸಿಎಂ ಮತ್ತು ಸರಕಾರ ಎಡವಿದೆ ಎಂದು ಸರಕಾರ ಮತ್ತು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂದು ಬೀದರ್ ಜಿಲ್ಲೆಗೆ ಭೇಟಿ ನೀಡಿ ಅಲ್ಲಿ ಬರ ಪರಿಹಾರ ಕಾಮಗಾರಿಗಳ ಪರಿಶಿಲನೆ ನಡೆಸಲಿದ್ದು, 28 ರಂದು ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ತೆರಳಲಿದ್ದಾರೆ. 29 ರಂದು ಯಾದಗಿರಿ ಮತ್ತು 30 ರಂದು ರಾಯಚೂರು ಜಿಲ್ಲೆಗಳಲ್ಲಿ ಬರ ಪರಿಹಾರ ಕಾಮಗಾರಿ ವೀಕ್ಷಿಸಲಿದ್ದು, ಮೇ 1 ರಂದು ತುಮಕೂರು ಮತ್ತು 2 ರಂದು ಚಿಕ್ಕಬಳ್ಳಾಪುರ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಜನರೊಂದಿಗೆ ಮತ್ತು ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಯಡಿಯೂರಪ್ಪರವರು ಬರದ ಸಂಪೂರ್ಣ ಅಧ್ಯಯನ ನಡೆಸಿ ಅದರ ವರದಿಯನ್ನು ಪ್ರಧಾನಮಂತ್ರಿ ಮತ್ತು ಕೇಂದ್ರ ಸರಕಾರಕ್ಕೆ ನೀಡಲಿದ್ದು, ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಹುದ್ಯೋಗಿ ಬರ ಪ್ರವಾಸ ಕೈಗೊಂಡರೂ ಜನರ ಸಮಸ್ಯೆ ಆಲಿಸುವಲ್ಲಿ ಮತ್ತು ಪರಿಹರಿಸುವಲ್ಲಿ ಹೆಚ್ಚಿನ ಒತ್ತು ನೀಡದೆ ಜನರ ಟೀಕೆಗೆ ಗುರಿಯಾಗಿದ್ದು, ಯಡಿಯೂರಪ್ಪ ನವರ ಈ ಪ್ರವಾಸ ಹೆಚ್ಚಿನ ಮಹತ್ವ ಪಡೆಯುವ ಸಾಧ್ಯತೆಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.