ಅಹ್ಮದಾಬಾದ್; ಭಾರತದಲ್ಲಿ ಕಲಾ ಪ್ರದರ್ಶನ ಮಾಡುತ್ತಿರುವ ಪಾಕಿಸ್ಥಾನಿ ಕಲಾವಿದರ ವಿರುದ್ಧದ ತಮ್ಮ ಹೋರಾಟವನ್ನು ಶಿವಸೇನೆ ಮತ್ತಷ್ಟು ತೀವ್ರಗೊಳಿಸಿದೆ.
ಪಾಕ್ ಗಾಯ ಗುಲಾಂ ಅಲಿ ಅವರ ಸಂಗೀತ ಕಛೇರಿಯನ್ನು ಎತ್ತಂಗಡಿ ಮಾಡುವಲ್ಲಿ ಯಶಸ್ವಿಯಾಗಿದ್ದ ಶಿವಸೇನೆ ಕಾರ್ಯಕರ್ತರು ಇದೀಗ ರಾಹತ್ ಫತೇ ಅಲಿ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ.
ಅಹ್ಮದಾಬಾದ್ನಲ್ಲಿ ಶನಿವಾರ ರಾಹತ್ ಅವರ ಸಂಗೀತ ಕಛೇರಿ ಆಯೋಜನೆಗೊಂಡಿತ್ತು. ಅದರ ಹೊರ ಭಾಗದಲ್ಲಿ ಜಮಾವಣೆಗೊಂಡಿದ್ದ ನೂರಾರು ಮಂದಿ ಶಿವಸೇನಾ, ಬಿಎಚ್ಪಿ, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದ್ದಾರೆ.
ಪೊಲೀಸರು ಹಲವಾರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ರಾಹತ್ ಫತೇ ಅಲಿ ಖಾನ್ ಪಾಕ್ ಮೂಲದ ಗಾಯಕನಾಗಿದ್ದು, ಬಾಲಿವುಡ್ನಲ್ಲಿ ಹಲವಾರು ಗೀತೆಗಳನ್ನು ಹಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.