ನವದೆಹಲಿ: ಉತ್ತರಾಖಂಡ ವಿಷಯ, ಬರ, ಪ್ರತಿಪಕ್ಷಗಳ ಮೇಲೆ ಸುಳ್ಳು ಆರೋಪ ಇದೇ ಮೊದಲಾದ ಕಾರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮೇ 6 ರಂದು ಸಂಸತ್ತಿಗೆ ಘೇರಾವ್ ಹಾಕಲು ನಿರ್ಧರಿಸಿದೆ.
ಇದರ ನೇತೃತ್ವವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಹಿಸಿಕೊಳ್ಳಲಿದ್ದಾರೆ. ಹಲವಾರು ನಾಯಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. ಜಂತರ್ ಮಂತರ್ನಿಂದ ಬೆಳಿಗ್ಗೆ ಜಾಥಾ ನಡೆಯಲಿದೆ.
ಈ ಘೇರಾವ್ ಪ್ರತಿಭಟನೆಗೆ ’ಪ್ರಜಾಪ್ರಭುತ್ವವನ್ನು ರಕ್ಷಿಸಿ’ ಎಂಬ ಹೆಸರನ್ನು ಕೊಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.