ಬಂಟ್ವಾಳ : ತುಂಬೆ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಉದ್ಘಾಟನೆ ಹಾಗೂ ಶಿಲನ್ಯಾಸವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಭಾನುವಾರ ಸಂಜೆ ನೆರವೇರಿಸಿದರು.
ವಳವೂರು ಹಾಗೂ ತುಂಬೆ ಬಳಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದ ಸಚಿವರು ತುಂಬೆ ಪ್ರಾಥಮಿಕ ಶಾಲೆ ಬಳಿ ಹಾಗೂ ಮಜಿ ನೂತನ ರಸ್ತೆಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ತುಂಬೆಯ ನೇತ್ರಾವತಿ ರಸ್ತೆಯಲ್ಲಿ ಅಭಿವೃದ್ದಿ ಕಾಮಾಗಾರಿಯೊಂದನ್ನು ಉದ್ಘಾಟಿಸಿದರು. ಈ ಸಂದರ್ಭ ಜಿ.ಪಂ.ಸದಸ್ಯರಾದ ಮಮತಾಗಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ಮುಡಿಪು ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಕೆಪಿಸಿಇ ಕಿಸಾನ್ ಘಟಕದ ಉಪಾಧ್ಯಕ್ಷ ಅಮೀರ್ ಅಹಮ್ಮದ್, ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ ಮೊದಲಾದವರು ಹಾಜರಿದ್ದರು.
ಇದಕ್ಕಿಂತ ಮುಂಚಿತವಾಗಿ ಸಚಿವರು ತುಂಬೆ ವಲಯ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮುಂದಿನ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.