ಮುಂಬಯಿ: ಪಾಕಿಸ್ಥಾನದ ಮಕ್ಕಳ ಹಕ್ಕು ಹೋರಾಟಗಾರ್ತಿ ಮಲಾಲ ಯೂಸುಫ್ ಝಾಯಿ ಅವರಿಗೆ ನೋಬೆಲ್ ಪ್ರಶಸ್ತಿಯನ್ನು ರಾಜಕೀಯ ಕಾರಣಕ್ಕಾಗಿ ನೀಡಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.
ಲಾಥೂರ್ನ ಮರಾಠವಾಡದಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಹೇಳಿಕೆ ನೀಡಿದ ಅವರು, ನಾನು ಯಾವತ್ತೂ ಪ್ರಶಸ್ತಿಗಳನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.
ನನಗೆ ಈ ಹಿಂದೆ ನೋಬೆಲ್ ಪ್ರಶಸ್ತಿ ಆಫರ್ ಮಾಡಲಾಗಿತ್ತು, ಆದರೆ ನಾನದನ್ನು ತಿರಸ್ಕರಿಸಿದ್ದೆ. ನಾನು ಕಾರ್ಯದಲ್ಲಿ ಮಾತ್ರ ನಂಬಿಕೆ ಇಡುತ್ತೇನೆ, ನನ್ನ ಕಾರ್ಯವನ್ನು ಗೌರವಿಸಬೇಕು ಎಂದು ಬಯಸುವುದಿಲ್ಲ, ಅರ್ಹರಿಗೆ ಮಾತ್ರ ನಾವು ಗೌರವ ಸಲ್ಲಿಸಬೇಕು.
ಮಾಲಲಳಿಗೆ ಪ್ರಶಸ್ತಿ ನೀಡಿದಕ್ಕೆ ನನ್ನ ವಿರೋಧವಿದೆ, ಆಕೆಗೆ ಪ್ರಶಸ್ತಿ ನೀಡಿದ್ದರಿಂದ ಯಾವ ಪ್ರಯೋಜನವೂ ಇಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.