ಬೆಂಗಳೂರು : ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತ್ರತ್ವದಲ್ಲಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು.
ಕಂಠೀರವ ಕ್ರೀಡಾಂಗಣದಿಂದ ಹೊರಟು ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಆರ್.ಅಶೋಕ್, ಸುರೇಶ್ಕುಮಾರ್, ಸೋಮಣ್ಣ, ಪದ್ಮನಾಭ ರೆಡ್ಡಿ ಸೇರಿ ಹಲವು ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಬಿಬಿಎಂಪಿ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ಸಂದರ್ಭ ಸಿಎಂ ಎಲ್ಲಾ ವಿಧದಲೂ ಆಡಳಿತ ನಿರ್ವಹಿಸುವಲ್ಲಿ ವಿಫಲರಾಗಿದ್ದು, ಬರನಿರ್ವಹಣೆ ಎಡವಿದ್ದಾರೆ. ಅದರಲ್ಲೂ ಆಸ್ತಿತೆರಿಗೆ ಏರಿಕೆ ಬರದ ನಡುವಿನಲ್ಲೇ ಬರೆ ಎಳೆದಂತಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ ಬಿಬಿಎಂಪಿಯನ್ನು ಘೇರಾವ್ ಹಾಕುವ ಮುನ್ನ ಬಿಬಿಎಂಪಿ ಕಛೇರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರ ಮುಖಂಡ ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.