ಶ್ರೀನಗರ: ಭಾರತೀಯ ಸೇನೆಯ ಸೂಪರ್ 30 ಕೋಚಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಶ್ಮೀರ ಕಣಿವೆಯ 15 ಮಂದಿ ವಿದ್ಯಾರ್ಥಿಗಳು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಂನಲ್ಲಿ ತೇರ್ಗಡೆಯನ್ನು ಹೊಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆಯ್ದ 30 ವಿದ್ಯಾರ್ಥಿಗಳಿಗೆ ಸೇನೆ 11 ತಿಂಗಳ ಉಚಿತ ಕೋಚಿಂಗ್ ತರಬೇತಿಯನ್ನು ಆಯೋಜಿಸಿತ್ತು. ಎಂಜಿನಿಯರಿಂಗ್ ಪದವಿ ಮಾಡಲು ಆಸಕ್ತ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.
ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಗಳನ್ನು ಇಲ್ಲಿ ಕಲಿಸಿಕೊಡಲಾಗಿತ್ತು. ಈ ತರಬೇತಿಗೆ ಸೇರಿದ 15 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪರೀಕ್ಷೆಯನ್ನು ಪಾಸು ಮಾಡಿದ್ದು ಸೇನೆಯ ಶ್ರಮಕ್ಕೆ ಸಾರ್ಥಕ್ಯ ಸಿಕ್ಕಿದೆ. ರಾಷ್ಟ್ರ ಮಟ್ಟದ ಈ ಪರೀಕ್ಷೆಯನ್ನು 15 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
15 ವಿದ್ಯಾರ್ಥಿಗಳಿಗೆ ಸೇನೆ ಟ್ರ್ಯಾಕ್ ಸೂಟ್ಸ್ ಮತ್ತು ಸ್ಟೇಶನರಿ ವಸ್ತುಗಳನ್ನು ಕೊಡುಗೆಯಾಗಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.