ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ದಾಖಲೆಗಳನ್ನು ಬಹಿರಂಗ ಮಾಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಶ್ವವಿದ್ಯಾಲಯಕ್ಕೆ ಆಗ್ರಹಿಸಿದ್ದಾರೆ.
ಮೋದಿಯವರ ಪದವಿಯ ದಾಖಲೆಗಳನ್ನು ವಿಶ್ವವಿದ್ಯಾಲಯ ತನ್ನ ವೆಬ್ಸೈಟ್ನಲ್ಲಿ ಹಾಕಬೇಕು, ಮಾತ್ರವಲ್ಲ ಸಾರ್ವಜನಿಕಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಪ ಕುಲಪತಿ ಯೋಗೇಶ್ ತ್ಯಾಗಿ ಅವರಿಗೆ ಪತ್ರ ಬರೆದಿರುವ ಅವರು, ’ಮೋದಿಯವರ ಪದವಿ ದಾಖಲೆಗಳನ್ನು ಸಂರಕ್ಷಿಸಲು ಕ್ರಮಕೈಗೊಳ್ಳಬೇಕು, ಅವುಗಳನ್ನು ಬಹಿರಂಗಗೊಳಿಸಿದರೆ ಮತ್ತಷ್ಟು ಒಳ್ಳೆಯದು’ ಎಂದಿದ್ದಾರೆ.
ಮೋದಿ ಪದವಿ ಶಿಕ್ಷಣ ಪಡೆದಿಲ್ಲ ಎಂದು ಆರೋಪಿಸಿರುವ ಅವರು, ಅವರ ಮಾಕ್ ಕಾರ್ಡ್, ಪ್ರವೇಶಾತಿ ದಾಖಲೆಗಳು ವಿಶ್ವವಿದ್ಯಾಲಯದಲ್ಲಿ ಇಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.