ನವದೆಹಲಿ: ಕೇರಳದಲ್ಲಿ ನಡೆಯುತ್ತಿರುವ ದಲಿತ ಮಹಿಳೆಯರ ವಿರುದ್ಧದ ದೌರ್ಜನ್ಯದ ಬಗ್ಗೆ ತನಿಖೆ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಮೂರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದ್ದಾರೆ.
ಅಲ್ಲದೇ ಪೆರಂಬವೂರಿನಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ದಲಿತ ಯುವತಿಯ ಕುಟುಂಬ ಸದಸ್ಯರನ್ನು ಗುರುವಾರ ಭೇಟಿಯಾಗಿ ಅವರು ಮಾತುಕತೆ ನಡೆಸಿದ್ದಾರೆ.
ಕೇರಳದಲ್ಲಿನ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ’ಇಷ್ಟು ದೊಡ್ಡ ಘಟನೆ ನಡೆದರೂ ಸರ್ಕಾರ ಮಲಗಿದೆ. ಸಿಎಂ ಏನೂ ಮಾತನಾಡುತ್ತಿಲ್ಲ. ಈ ಘಟನೆಗೆ ಜವಾಬ್ದಾರಿ ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
ಅರ್ಜುನ್ ರಾಮ್ ಮೆಘಾವಾಲ್, ಮೀನಾಕ್ಷಿ ಲೇಖಿ, ಉದಿತ್ ರಾಜ್ ಅವರನ್ನೊಳಗೊಂಡ ಸಮಿತಿಯನ್ನು ಷಾ ರಚಿಸಿದ್ದು, ಕೇರಳದಲ್ಲಿ ನಡೆಯುತ್ತಿರುವ ದಲಿತರ ವಿರುದ್ಧದ ದೌರ್ಜನ್ಯಗಳ ಪರಿಶೀಲನೆಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.