ನವದೆಹಲಿ : ಈ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಲು ಸೂಚಿಸಿ ಮಾನವ ಸಂಪನ್ಮೂಲ ಸಚಿವಾಲಯ ಸುತ್ತೋಲೆಯನ್ನು ಕಳುಹಿಸಿದೆ ಎಂದು ಆಯುಷ್ನ ರಾಜ್ಯ ಸಚಿವ ಶ್ರೀಪಾದ್ ಯಶೋನಾಯಕ್ ತಿಳಿಸಿದ್ದಾರೆ.
ಈ ಹಿಂದೆ ಶಾಲೆಗಳಲ್ಲಿ ಯೋಗವನ್ನು ಖಡ್ಡಾಯವಾಗಿ ಮಾಡಲಾಗುತ್ತಿರಲಿಲ್ಲ, ಆಸಕ್ತಿ ಇದ್ದವರು ಮಾತ್ರ ಯೋಗದಲ್ಲಿ ಪಾಲ್ಗೊಳ್ಳುತ್ತಿದ್ದರು ಮತ್ತು ಹೆಸರನ್ನು ನೋಂದಾಯಿಸಿಕೊಳ್ಳುತ್ತಿದ್ದರು. ಅಲ್ಲದೇ ಶಾಲೆಗಳಲ್ಲಿ ಪಿಟಿ ಸಮಯದಲ್ಲಿ ಯೋಗವನ್ನು ಹೇಳಿಕೊಡಲಾಗುತ್ತಿತ್ತು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಎಲ್ಲಾ ಶಾಲೆಗಳಲ್ಲೂ ಯೋಗ ಕಡ್ಡಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಈ ವರ್ಷ 2 ನೇ ವರ್ಷದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳು ನಡೆಯುತ್ತಿದ್ದು, ವಿಜೃಂಭಣೆಯಿಂದ ಆಚರಿಸಲು ಚಿಂತಿಸಲಾಗಿದೆ ಎಂದು ಅವರು ಸದನದಲ್ಲಿ ಮಾಹಿತಿಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.