ಬೆಳ್ತಂಗಡಿ : ಯಕ್ಷಗಾನ ಕಲೆಯು ಜನರಿಗೆ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮಪ್ರಜ್ಞೆಯನ್ನು ತಿಳಿಸುವ ಮಾಧ್ಯಮವಾಗಿದೆ. ಮನುಷ್ಯನಲ್ಲಿ ಧರ್ಮಪ್ರಜ್ಞೆ ಜಾಗೃತಿಗೊಂಡಾಗ ಸಮಾಜ ಶಾಂತ ಸ್ಥಿತಿಯಲ್ಲಿ ಇರುತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
ಅವರು ಈಚೆಗೆ ಕೊಕ್ರಾಡಿ ಕೊಂಡಂಗೆಯಲ್ಲಿ ನಡೆದ ಸತ್ಯನಾರಾಯಣ ಪೂಜೆ, ಕಟೀಲು ದೇವಿ ಪೂಜೆ ಹಾಗೂಯಕ್ಷಗಾನ ಬಯಲಾಟದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಮಾತನಾಡಿ ಧರ್ಮ ಕಾರ್ಯಗಳು ಮನುಷ್ಯನನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದರು.
ಮೂಡುಬೈಲು ನವೀನ್ಚಂದ್ರ ಬಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಹರಿನಾರಾಯಣ ಅಸ್ರಣ್ಣ, ನಿವೃತ್ತ ಶಿಕ್ಷಕ ರವಿ ಹೆಗ್ಡೆ, ನೀಲಮ್ಮ ಹೆಗ್ಗಡ್ತಿ, ದೀಪ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಸುಧಾಕರ ಹೆಗ್ಡೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಾಗರಾಜ ಜಿ. ಭಟ್ ಕೆಲ್ಲಗುತ್ತಿಗೆ, ನವೀನ್ ಚಂದ್ರಬಳ್ಳಾಲ್, ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಬಡ್ಡಿಆಟಗಾರ ಸುಕೇಶ್ ಹೆಗ್ಡೆ ಇವರನ್ನು ಸನ್ಮಾನಿಸಲಾಯಿತು.
ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಂಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.