ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಜನ-ಮನ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಮುಂದಿನ ಶುಕ್ರವಾರಕ್ಕೆ ( ಮೇ 13) ಮೂರು ವರ್ಷಗಳಾಗುತ್ತಿದ್ದು, ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು ಈ ಜನ-ಮನ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ರೂಪಿಸಿದ ಆಯ್ದ 15 ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ನೇರವಾಗಿ ಸಂವಾದ ನಡೆಸುವುದೇ ಈ ವಿಶಿಷ್ಟ ಜನ-ಮನ ಕಾರ್ಯಕ್ರಮ. ಈ ಕಾರಣದಿಂದಾಗಿ ಜನರ ಮನಸ್ಸಿನಲ್ಲೇನಿದೆ ಎಂದು ತಿಳಿದುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ.
ಜಿಕೆವಿಕೆಯಲ್ಲಿನ ಬಾಬು ರಾಜೇಂದ್ರ ಪ್ರಸಾದ್ ಇಂಟರ್ನ್ಯಾಷನಲ್ ಕನ್ವೆಷನ್ ಸೆಂಟರ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸುಮಾರು 2000 ಜನರು ಆಗಮಿಸಲಿದ್ದಾರೆ ಎನ್ನಲಾಗಿದೆ. ಒಂದೊಂದು ಜಿಲ್ಲೆಯಿಂದ 15 ಮಂದಿಯಂತೆ ಒಟ್ಟು 45 ಜನ ಯೋಜನೆಗಳ ಫಲಾನುಭವಿಗಳು ಅವರು ಪಡೆದುಕೊಂಡ ಯೋಜನೆಯಿಂದ ಆದ ಪ್ರಯೋಜನ, ಇದರಿಂದ ಜೀವನದಲ್ಲಿ ಉಂಟಾದ ಬದಲಾವಣೆ, ಯೋಜನೆಯಲ್ಲಿ ಏನಾದರೂ ಬದಲಾವಣೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಯೋಜನೆಯ ಸಾಧಕ-ಬಾಧಕಗಳ ಕುರಿತು ಸಂವಾದ ನಡೆಯಲಿದೆ ಎನ್ನಲಾಗಿದೆ.
3 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶವನ್ನು ಏರ್ಪಡಿಸಲು ಈ ಮೊದಲು ನಿಶ್ಚಯಿಸಲಾಗಿತ್ತು. ಆದರೆ ರಾಜ್ಯದಲ್ಲಿ ಬರಗಾಲವಿರುವ ಕಾರಣದಿಂದಾಗಿ ಹಾಗೂ ಜನರ ಟೀಕೆಗೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಲು ಸಮಾವೇಶವನ್ನು ಏರ್ಪಡಿಸದೆ, ಜನರೊಂದಿಗೆ ನೇರವಾಗಿ ಸಂವಾದ ನಡೆಸುವ ಕಾರ್ಯಕ್ರಮವನ್ನು ಆಚರಿಸಲು ಸಿದ್ಧರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.