ನವದೆಹಲಿ: ಪ್ರತಿ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರು ರೇಡಿಯೋ ಮೂಲಕ ದೇಶದ ಜನರನ್ನು ಉದ್ದೇಶಿಸಿ ತಮ್ಮ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುತ್ತಾರೆ. ಈ ವೇಳೆ ಅತೀ ಪ್ರಮುಖ ವಿಷಯಗಳ ಬಗ್ಗೆ ಅವರು ಅಭಿಪ್ರಾಯವನ್ನು ತಿಳಿಸುತ್ತಾರೆ.
ಈ ಬಾರಿಯ ಅವರ ರೇಡಿಯೋ ಕಾರ್ಯಕ್ರಮ ’ಮನ್ ಕೀ ಬಾತ್’ ಮೇ 22ರಂದು ನಡೆಯಲಿದೆ. ಮೇ 26ಕ್ಕೆ ಅವರ ಸರ್ಕಾರ ಎರಡು ವರ್ಷ ಪೂರೈಸುವ ಹಿನ್ನಲೆಯಲ್ಲಿ ಈ ಬಾರಿಯ ಮನ್ ಕೀ ಬಾತ್ ಭಾರೀ ಮಹತ್ವವನ್ನು ಪಡೆದುಕೊಂಡಿದೆ.
ಈ ಬಾರಿ ಅವರು ಹಲವಾರು ವಿಷಯಗಳನ್ನು, ಥೀಮ್ಗಳನ್ನು ಕಾರ್ಯಕ್ರಮಕ್ಕಾಗಿ ನೀಡುವಂತೆ ಜನರಿಗೆ ಮನವಿ ಸಲ್ಲಿಸಿದ್ದಾರೆ. ಇದು ಅವರ 20ನೇ ಮನ್ ಕೀ ಬಾತ್ ಕಾರ್ಯಕ್ರಮವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.