ನವದೆಹಲಿ: ಒಲಿಂಪಿಕ್ ಪದಕ ವಿಜೇತರನ್ನು ಸಮಾಜ ಗುರುತಿಸುವುದಕ್ಕಾಗಿ ಅವರನ್ನು ಗೌರವಿಸುವುದರ ನಿಟ್ಟಿನಲ್ಲಿ ಮುಂಬರುವ ರಿಯೋ ಒಲಿಂಪಿಕ್ಸ್ನ ಪದಕ ವಿಜೇತರನ್ನು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.
ಈ ಹಿಂದೆ ವೈಯಕ್ತಿಕ ಕ್ರೀಡೆಗಳಲ್ಲಿ ಸಾಧನೆ ತೋರಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಪರಿಗಣಿಸಲಾಗದ ಕ್ರೀಡಾಪಟುಗಳನ್ನು ಉನ್ನತ ಕ್ರೀಡಾ ಗೌರವಕ್ಕೆ ಪರಿಗಣಿಸಲಾಗುವುದು. ಇನ್ನು ತಂಡಗಳ ಸ್ಪರ್ಧೆಗಳಲ್ಲಿ ಶ್ರಮಿಸಿ ದೇಶದ ಕೀರ್ತಿ ಹೆಚ್ಚಿಸಿದ ಪದಕ ವಿಜೇತರನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ರಾಜೀವ್ ಗಾಂಧಿ ಖೇಲ್ ರತ್ನ ಹಾಗೂ ಅರ್ಜುನ ಪ್ರಶಸ್ತಿ ಯೋಜನೆಗಳ ಪ್ರಸ್ತುತ ಅಸ್ತಿತ್ವದಲ್ಲಿರುವ ನಿಬಂಧನೆಗಳ ಪ್ರಕಾರ ನಾಲ್ಕು ವರ್ಷಗಳ (2011-15) ಪದಕ ವಿಜೇತರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಅದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.