ಪುತ್ತೂರು : ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ , ತಾಲೂಕಿನಲ್ಲಿ ಒಟ್ಟು 13 ಡೆಂಘೆ ಪ್ರಕರಣ ಪತ್ತೆಯಾಗಿದೆ.ಉಳಿದಂತೆ ಏಪ್ರಿಲ್ ತಿಂಗಳ ಬಳಿಕ ಕಡಬದಲ್ಲಿ 2, ಕಾಣಿಯೂರು 3 , ಕೊಲ 3 , ಪಾಣಾಜೆ 3, ಸರ್ವೆ 1, ಉಪ್ಪಿನಂಗಡಿ 1 ಸೇರಿದಂತೆ ಒಟ್ಟು 13 ಪ್ರಕರಣ ತಾಲೂಕಿನಲ್ಲಿ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ 102ಸಂಶಯಾಸ್ಪದ ಜ್ವರ ಪ್ರಕರಣ ಕಂಡುಬಂದಿದೆ.
ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ್ ಅಧ್ಯಕ್ಷತೆಯಲ್ಲಿ ಮಂಗಳವಾರ ತಾಲೂಕು ಪಂಚಾಯತ್ನ ಪ್ರಥಮ ಸಾಮಾನ್ಯ ಸಭೆ ನಡೆಯಿತು. ಈ ಸಭೆಯಲ್ಲಿ ಆರೋಗ್ಯಾಧಿಕಾರಿ ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಈ ಮಾಹಿತಿಗೆ ಆಕ್ರೋಶ ವ್ಯಕ್ತಪಡಿಸಿದ ,ಸದಸ್ಯ ಸಾಜ ರಾಧಾಕೃಷ್ಣ ಆಳ್ವ,ಪ್ರತಿ ಗ್ರಾಮದಲ್ಲಿ 5-6 ಡೆಂಘೆ ಪ್ರಕರಣ ಪತ್ತೆಯಾಗುತ್ತಿದೆ. ಆದರೆ ತಾಲೂಕಲ್ಲಿ ಕೇವಲ 13 ಪ್ರಕರಣ ಪತ್ತೆಯಾಗಿದೆ ಎಂದು ಮಾಹಿತಿ ನೀಡುತ್ತಾರೆ. ಹಾಗಾದರೆ ಉಳಿದ ಜ್ವರ ಪ್ರಕರಣಗಳನ್ನು ಏನೆಂದು ಪರಿಗಣಿಸಿದ್ದೀರಿ ಎಂದು ಪ್ರಶ್ನಿಸಿದರು.
ಜಿಪಂ ಸದಸ್ಯ ಪಿ.ಪಿ.ವರ್ಗೀಸ್, ಕಡಬ ಭಾಗದಲ್ಲಿ ಡೆಂಘೆ ಹಾವಳಿ ಹೆಚ್ಚಿದೆ. ಆದರೆ ಕಡಬದಲ್ಲಿ ಕೇವಲ 2 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು. ಸದಸ್ಯ ಫಝಲ್ ಮಾತನಾಡಿ, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗೆ, 48 ಗಂಟೆ ಅವಧಿ ನೀಡಿದ ಉದಾಹರಣೆ ಇದೆ. ಆದರೆ ಇದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದಂತಿಲ್ಲ ಎಂದರು.
ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಪ್ರತಿಕ್ರಿಯಿಸಿ, ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರ ಮೂಲಕ ಕರಪತ್ರ ಹಂಚಲಾಗಿದೆ. ಪ್ರತಿ ಗ್ರಾಮ ಪಂಚಾಯತ್ಗಳ ಮೂಲಕ ಕರಪತ್ರ ಹಂಚಲಾಗಿದೆ. ಫಾಗಿಂಗ್ ಕಾರ್ಯ ನಡೆಸಲಾಗಿದೆ ಎಂದರು. ಮಳೆಗಾಲ ಹತ್ತಿರದಲ್ಲಿದ್ದು ಮೇಲಾಧಿಕಾರಿಗಳ ಗಮನಕ್ಕೆ ತಂದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸದಸ್ಯರು ಒತ್ತಾಯಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದರ ಶಾಸಕಿ ಶಕುಂತಳಾ ಶೆಟ್ಟಿ, ಈ ಬಗ್ಗೆ ಗಮನ ಹರಿಸುವ ಭರವಸೆ ನೀಡಿದರು. ಜೊತೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯ ರಾಶಿಯ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ,ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.