ನವದೆಹಲಿ: ಕೇಂದ್ರದ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುವ ಸಲುವಾಗಿ ಬುಧವಾರ ಎಎಪಿ ನವದೆಹಲಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ನಡೆಸಲಿದೆ. ಆದರೆ ಈ ಪ್ರತಿಭಟನೆಯ ವೇಳೆ ಮಾಧ್ಯಮಗಳನ್ನು ತನ್ನ ಹತ್ತಿರಕ್ಕೆ ಬಿಡಬೇಡಿ ಎಂದು ಅರವಿಂದ್ ಕೇಜ್ರಿವಾಲ್ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಂಡಾಯ ನಾಯಕರ ಉಚ್ಛಾಟನೆ, ಪಕ್ಷದಲ್ಲಿನ ಆತಂರಿಕ ಕಲಹದ ಬಗೆಗೆ ಮಾಧ್ಯಮಗಳು ಕೇಳುವ ಕಠಿಣ ಪ್ರಶ್ನೆಗೆ ಉತ್ತರಿಸಲು ಕಷ್ಟವಾಗಬಹುದೆಂಬ ಕಾರಣಕ್ಕೆ ಅವರು ಈ ರೀತಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ಇನ್ನೊಂದೆಡೆ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡ ಅಶುತೋಷ್ ‘ವಿವಿಧ ರಾಜ್ಯಗಳಿಂದ ಆಗಮಿಸುವ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಭೂಸ್ವಾಧೀನ ಮಸೂದೆಯನ್ನು ವಾಪಾಸ್ ಪಡೆಯದೇ ಹೋದರೆ ಇಡೀ ಭಾರತದಾದ್ಯಂತ ಚಳುವಳಿ ನಡೆಸಲಾಗುವುದು’ ಎಂದಿದ್ದಾರೆ.
‘ಬಿಜೆಪಿ ಉದ್ಯಮಿಗಳಿಂದ ಸಾಕಷ್ಟು ಸಹಕಾರಗಳನ್ನು ಪಡೆದುಕೊಂಡಿದೆ, ಇದೀಗ ಅದನ್ನು ವಾಪಾಸ್ ಕೊಡಲು ನರೇಂದ್ರ ಮೋದಿ ಮುಂದಾಗಿದ್ದಾರೆ. ಹೀಗಾಗೀ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಇಂದು ಪ್ರತಿಭಟನೆ ನಡೆಯಲಿದೆ. ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಎಎಪಿ ನಿರ್ಧರಿಸಿತ್ತು, ಆದರೆ ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಈ ಯೋಜನೆಯನ್ನು ಕೈಬಿಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.