ಬೆಳ್ತಂಗಡಿ : ಜಿಲ್ಲೆಯಲ್ಲಿ ಬಿದ್ದಿರುವ ಮಳೆಯಿಂದಾಗಿ ನೇತ್ರಾವತಿ ನದಿಯ ಒಳ ಹರಿವು ಹೆಚ್ಚಿದ್ದು ತುಂಬೆ ಡ್ಯಾಂನಲ್ಲಿ 8.11 ಅಡಿ ನೀರು ಸಂಗ್ರಹವಾಗಿರುವುದರಿಂದ ಪ್ರಸ್ತುತ ಕುಡಿಯುವ ನೀರನ್ನು ಪೂರೈಸಲು ಸಾಧ್ಯವಾಗುತ್ತಿರುವುದರಿಂದ ಜಿಲ್ಲಾಡಳಿತವು ಈ ಹಿಂದೆ ಹೊರಡಿಸಲಾಗಿದ್ದ ನಿಷೇಧದ ಆದೇಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಗುರುವಾರ ಬೆಳ್ತಂಗಡಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 12 ರಂದು ನೀಡಿದ ಆದೇಶದಂತೆ ಶಂಭೂರಿನಲ್ಲಿರುವ ಎಎಮ್ಆರ್ ಪವರ್ ಪ್ರೈ. ಲಿ., ಡ್ಯಾಂನಲ್ಲಿರುವ ನೀರನ್ನು ಎಎಮ್ಆರ್ ಪ್ರೈ. ಲಿ., ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿ. ಹಾಗೂ ಮಂಗಳೂರು ಸೆಝ್ ಲಿ., ಮತ್ತು ಯಾವುದೇ ಇನ್ನಿತರ ಸಂಸ್ಥೆ ಹಾಗೂ ಸಾರ್ವಜನಿಕರು ತೆಗೆಯುವುದನ್ನು ನಿಷೇಧಿಸಲಾಗಿತ್ತು. ಜಿಲ್ಲೆಯಲ್ಲಿರುವ ಡ್ಯಾಂಗಳಿಂದ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸುವ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಮೇ 2 ರಂದು ದಿಶಾ ಪವರ್ ಪ್ರೋಜೆಕ್ಟ್ನಿಂದ ಕುಡಿಯುವ ನೀರಿನ ಪೂರೈಕೆಗೆ ತುಂಬೆ ವೆಂಟೆಡ್ ಡ್ಯಾಂಗೆ ನೀರನ್ನು ಹರಿಸುವ ಬಗ್ಗೆ ಆದೇಶ ಹೊರಡಿಸಲಾಗಿತ್ತು.
ಇದೀಗ ಜಿಲ್ಲೆಯಲ್ಲಿ ಮಳೆ ಬಂದಿದ್ದು ನೇತ್ರಾವತಿ ನದಿಯ ಒಳ ಹರಿವು ಹೆಚ್ಚಾಗುತ್ತಿದೆ. ತುಂಬೆ ವೆಂಟೆಡ್ ಡ್ಯಾಂಗೆ ನೀರು ಹರಿದು ಬರುತ್ತಿದ್ದು 8.11 ಅಡಿ ನೀರು ಸಂಗ್ರಹವಾಗಿದೆ. ಹಾಲಿ ಇರುವ ನೀರನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹದಿನೈದು ದಿವಸಗಳಿಗೆ ಸರಬರಾಜು ಮಾಡಲು ಸಾಕಾಗಬಹುದೆಂದು ಅಂದಾಜಿಸಲಾಗಿದೆ.
ಹವಾಮಾನ ಇಲಾಖೆ ಜೂನ್ ಮೊದಲ ವಾರಾಂತ್ಯದಲ್ಲಿ ಮುಂಗಾರು ಮಳೆ ಬರಬಹುದೆಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಂಸಿಎಫ್ ಯೂರಿಯಾ ಘಟಕದಲ್ಲಿ ಉತ್ಪಾದನೆ ಕುಂಠಿತದಿಂದ ರಾಜ್ಯದ ಕೃಷಿ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ಹಿಂದೆ ಜಿಲ್ಲಾಡಳಿತವು ಹೊರಡಿಸಿದ್ದ ಎಲ್ಲಾ ಆದೇಶಗಳನ್ನು ತಕ್ಷಣ ಜಾರಿಗೆ ಬರುವಂತೆ ಹಿಂದಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.