ಬಂಟ್ವಾಳ : ತಾಲೂಕಿನ ಪುಂಜಾಲಕಟ್ಟೆ ಸ.ಪ.ಪೂ.ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ 24 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಪಿ.ರಘುನಾಥ ರೈ ಅವರಿಗೆ ಬೀಳ್ಕೊಡುಗೆ ಮತ್ತು ಸಮ್ಮಾನ ಕಾರ್ಯಕ್ರಮ ಶಾಲೆಯಲ್ಲಿ ಜರಗಿತು.
ಪಿ.ರಘುನಾಥ ರೈ ದಂಪತಿಗಳನ್ನು ಸ್ಮರಣಿಕೆ, ಸಮ್ಮಾನಪತ್ರ ನೀಡಿ ಸಮ್ಮಾನಿಸಲಾಯಿತು. ಪ್ರಭಾರ ಉಪಪ್ರಾಂಶುಪಾಲೆ ಅರ್ಚನಾ ಸಿ.ಪಿ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಪಿ.ರಘುನಾಥ ರೈ ಅವರಿಂದ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಉನ್ನತಿ ಹೊಂದಲು ಕಾರಣರಾಗಿದ್ದು ಶಾಲೆಗೂ ಕೀರ್ತಿ ತಂದಿದ್ದಾರೆ. ಕರ್ತವ್ಯದ ಜೊತೆ ಸೇವಾ ಮನೋಭಾವನೆ, ವಿದ್ಯಾರ್ಥಿಗಳ ಅಭಿವೃದ್ಧಿಯ ಚಿಂತನೆಯಿಂದ ಎಲ್ಲರ ಪ್ರೀತಿಗಳಿಸಿದ್ದಾರೆ ಎಂದು ಹೇಳಿದರು.
ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ಅವರು ಅಭಿನಂದನ ಭಾಷಣ ಮಾಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಆದರ್ಶ ಗುರು, ಮಾರ್ಗದರ್ಶಕರಾಗಿ ಸಾಧನೆಯ ಛಲದ ಸೂರ್ತಿದಾತರಾಗಿದ್ದರು. ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಶಿಕ್ಷಣ ಸಂಸ್ಥೆಯ ಪ್ರಗತಿಗೆ ಕಾರಣರಾಗಿದ್ದರು ಎಂದು ಹೇಳಿದರು. ಸಮ್ಮಾನಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ರೈ ಅವರು ಎಡರುತೊಡರುಗಳ ನಡುವೆಯೂ ಎಲ್ಲರ ಸಹಕಾರದಿಂದ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿದೆ.ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಕ್ಷಮತೆ ಹೊಂದಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರಸ್ತುತ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಇರುವುದರಿಂದ ಹೆಚ್ಚಿನ ಸಾಧನೆಗೆ ಅವಕಾಶವಿದೆ ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಓರ್ವ ವಿದ್ಯಾರ್ಥಿಗೆ 10,000ರೂ. ದತ್ತಿ ನಿಧಿಯನ್ನು ಸ್ಥಾಪಿಸುವುದಾಗಿ ಘೋಷಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ , ಗೀತಾ ಭಟ್, ಪ್ರ.ದ.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಭಟ್, ಶಿಕ್ಷಕರು, ಸಿಬಂದಿ ವರ್ಗ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಭಾರ ಉಪಪ್ರಾಂಶುಪಾಲೆ ಅರ್ಚನಾ ಸಿ.ಪಿ. ಅವರು ಸ್ವಾಗತಿಸಿದರು. ಸಹ ಶಿಕ್ಷಕರಾದ ಶಾಂತಾ ಎಸ್. ಸಮ್ಮಾನಪತ್ರ ವಾಚಿಸಿದರು. ಹರಿಪ್ರಸಾದ್ ವಂದಿಸಿದರು. ಧರಣೇಂದ್ರ ಜೈನ್ ಕೆ. ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.