ನವದೆಹಲಿ: ಮಹಿಳೆಯರ ಸುರಕ್ಷತೆಗಾಗಿ ದೇಶದ ಎಲ್ಲಾ ಸಾರ್ವಜನಿಕ ಬಸ್ಗಳು ಪ್ಯಾನಿಕ್ ಬಟನ್ಗಳನ್ನು ಅಳವಡಿಸಿಕೊಳ್ಳುವುದು ಇನ್ನು ಮುಂದೆ ಕಡ್ಡಾಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ’ದುರಾದೃಷ್ಟಕರ ಘಟನೆಗಳಿಂದ ಮಹಿಳೆಯರನ್ನು ರಕ್ಷಿಸಲು ಸಾರಿಗೆ ವಾಹನಗಳು ಎಮರ್ಜೆನ್ಸಿ ಪ್ಯಾನಿಕ್ ಬಟನ್ಗಳನ್ನು ಅಳವಡಿಸಿಕೊಳ್ಳುವುದು ಇನ್ನು ಮುಂದೆ ಕಡ್ಡಾಯ, ಅಂತೆಯೇ ಸಿಸಿಟಿವಿ ಕ್ಯಾಮರಾ, ಜಿಪಿಎಸ್ ತಂತ್ರಜ್ಞಾನವನ್ನೂ ಅಳವಡಿಸಿಕೊಳ್ಳಬೇಕು’ ಎಂದಿದ್ದಾರೆ.
ಈಗಾಗಲೇ ರಾಜಸ್ಥಾನದಲ್ಲಿ ಇದು ಪರೀಕ್ಷಾರ್ಥವಾಗಿ ಜಾರಿಗೆ ಬಂದಿದ್ದು, 20 ಬಸ್ಗಳ ಮುಂಬಾಗಿಲಲ್ಲಿ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ, ಇದನ್ನು ಪ್ರೆಸ್ ಮಾಡಿದಾಗ ಎಮರ್ಜೆನ್ಸಿ ಮೆಸೇಜ್ ಕಂಟ್ರೋಲ್ ರೂಂಗೆ ಹೋಗುತ್ತಿದೆ. ಇದರಿಂದ ಬಸ್ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ವೀಕ್ಷಿಸಲು ಸಾಧ್ಯ.
ಜೂನ್ 2ಳಗೆ ಎಲ್ಲಾ ಬಸ್ಗಳು ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ಗಡ್ಕರಿ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.