ಮುಂಬಯಿ: ಎಐಬಿ ಕಾಮಿಡಿಯನ್ ತನ್ಮಯ್ ಭಟ್ ಲೆಜೆಂಡ್ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಅವರಿಗೆ ಅವಮಾನಿಸಿ ಮಾಡಿರುವ ವೀಡಿಯೋವನ್ನು ಗೂಗಲ್ ಮತ್ತು ಯೂಟ್ಯೂಬ್ ಬ್ಲಾಕ್ ಮಾಡುವ ಸಾಧ್ಯತೆ ಇದೆ.
ಎಂಎನ್ಎಸ್ ಈ ಬಗ್ಗೆ ಪ್ರಕರಣ ದಾಖಲಿಸಿದ ಬಳಿಕ ಮಾಹಾರಾಷ್ಟ್ರ ಪೊಲೀಸ್ ಅಧಿಕಾರಿಗಳು ಕಾನೂನು ತಜ್ಞರ ಸಲಹೆಯನ್ನು ಪಡೆದು ಮುಂದಿನ ಕ್ರಮ ಜರುಗಿಸಲು ನಿರ್ಧರಿಸಿದ್ದಾರೆ. ಗೂಗಲ್ ಮತ್ತು ಯೂಟ್ಯೂಬ್ನ್ನು ಸಂಪರ್ಕಿಸಿ ಈ ವಿವಾದಾತ್ಮಕ ವೀಡಿಯೋವನ್ನು ಬ್ಲಾಕ್ ಮಾಡುವಂತೆ ಮನವಿ ಸಲ್ಲಿಸಲಿದ್ದಾರೆ.
ತನ್ಮಯ್ ಭಟ್ ಸಚಿನ್ ವರ್ಸಸ್ ಲತಾ ಸಿವಿಲ್ ವಾರ್ ಎಂಬ ವೀಡಿಯೋ ಬಿಡುಗಡೆ ಮಾಡಿ ಇಬ್ಬರನ್ನೂ ಕೆಟ್ಟದಾಗಿ ಚಿತ್ರಿಸಿ ಅವಮಾನ ಮಾಡಿದ್ದಾನೆ. ಈ ಬಗ್ಗೆ ಪೊಲೀಸ್ ವಿಶೇಷ ದಳ ತನಿಖೆ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.