ಗುವಾಹಟಿ: ‘ವಿಶ್ವ ತಂಬಾಕು ವಿರೋಧಿ ದಿನ’ವಾದ ಸೋಮವಾರ ಅಸ್ಸಾಂನ ಹೊಸ ಬಿಜೆಪಿ ಸರ್ಕಾರ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಧೂಪಕಾನ ಸೇವನೆಯನ್ನು ನಿಷೇಧಿಸಿದೆ.
ಸಾರ್ವಜನಿಕರ ಆರೋಗ್ಯಕ್ಕೆ ಸ್ವಚ್ಛ ಪರಿಸರ ಮತ್ತು ಉತ್ತಮ ವಾಯು ಗುಣಮಟ್ಟವನ್ನು ಖಚಿತಪಡಿಸಿಜಕೊಳ್ಳಲು ಈ ಕ್ರಮ ಜಾರಿಗೆ ತರಲಾಗಿದೆ. ನಿಮಯ ಉಲ್ಲಂಘಿಸಿದಲ್ಲಿ ಅಗತ್ಯ ಕಾನೂನು ಕ್ರಮದೊಂದಿಗೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಆಯುಕ್ತರು ತಿಳಿಸಿದ್ದಾರೆ.
ಸಾರ್ವಜನಿಕ ಸಾರಿಗೆ ವಾಹನದಳಲ್ಲಿ ’ನೋ ಸ್ಮೋಕಿಂಗ್’ ಸ್ಟಿಕರ್ಗಳನ್ನು ಅಂಟಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಾಯೋಜಿತ ’ವಿಶ್ವ ತಂಬಾಕು ದಿನ’ವನ್ನು ತಂಬಾಕು ಬಳಕೆಯನ್ನು ತಗ್ಗಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.