ಪುಲ್ಗಾಂ: ಮಹಾರಾಷ್ಟ್ರದ ಪುಲ್ಗಾಂ ಪ್ರದೇಶದಲ್ಲಿರುವ ಭಾರತದ ಅತೀ ದೊಡ್ಡ ಭೂಸೇನಾ ಶಸ್ತ್ರಾಸ್ತ್ರ ಸಂಗ್ರಹಣಾ ಉಗ್ರಾಣದಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಢ ಸಂಭವಿಸಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಲಿಫ್ಟಿನೆಂಟ್ ಕೊಲೊನಿಯಲ್ ಆರ್.ಎಸ್.ಪವಾರ್, ಮೇಜರ್ ಮೋಹನ್.ಕೆ ಅವರು ಮೃತರಾಗಿದ್ದಾರೆ. ಇಬ್ಬರು ಅಧಿಕಾರಿಗಳು, 9 ಯೋದರು, ಆರು ನಾಗರಿಕರು ಗಾಯಗೊಂಡಿದ್ದಾರೆ.
ಆಸ್ಪತ್ರೆಗೆ ಸಚಿವ ಮನೋಹರ್ ಪರಿಕ್ಕರ್, ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಆಗಮಿಸಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಸುಮಾರು 7 ಸಾವಿರ ಎಕರೆ ಪ್ರದೇಶದಲ್ಲಿ ಈ ಉಗ್ರಾಣವಿದ್ದು, ನಾಗಪುರದಿಂದ 115 ಕಿ.ಮೀ ದೂರದಲ್ಲಿದೆ. ಇದು ದೇಶದ ಅತೀದೊಡ್ಡ ಶಸ್ತ್ರಾಸ್ತ್ರ ಉಗ್ರಾಣ. ಬ್ರಹ್ಮೋಸ್ ಮಿಸೆಲ್, ಎಕೆ47 ರೈಫಲ್, ಇತರ ಶಸ್ತ್ರಾಸ್ತ್ರ, ಬಾಂಬ್, ಸ್ಫೋಟಕಗಳನ್ನು ಇಲ್ಲಿ ಸಂಗ್ರಹಿಸಿಡಲಾಗಿತ್ತು.
ಮಧ್ಯರಾತ್ರಿ 1 ಗಂಟೆಗೆ ಅಗ್ನಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳಿಗೆ ಹಾನಿಯಾಗಿದೆ. ಘಟನೆಯ ಹಿಂದೆ ಉಗ್ರರ ಕೈವಾಡದ ಶಂಕೆಯೂ ದಟ್ಟವಾಗಿದೆ. ಇನ್ನೊಂದೆಡೆ ಈ ಘಟನೆ ಶಸ್ತ್ರಾಸ್ತ್ರ ಉಗ್ರಾಣಗಳ ಸುರಕ್ಷತೆಯ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.