ನ್ಯೂಯಾರ್ಕ್: ಮೂರು ಬಾರಿ ಹೆವಿ ವೇಯ್ಟ್ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಆಗಿದ್ದ ಮೊಹಮ್ಮದ್ ಅಲಿ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.
ಮೊಹಮ್ಮದ್ ಅಲಿ (74) ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ’ದ ಗ್ರೇಟೆಸ್ಟ್’ ಎಂದೇ ಪ್ರಖ್ಯಾತಿ ಪಡೆದಿದ್ದ ಅಲಿ 1981ರಲ್ಲಿ ಬಾಕ್ಸಿಂಗ್ ಲೋಕದಿಂದ ನಿವೃತ್ತಿ ಹೊಂದಿದ್ದರು.
ಕಳೆದ 32 ವರ್ಷಗಳಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಮೊಹಮ್ಮದ್ ಅಲಿ ಒಟ್ಟು 61 ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಂದ್ಯಗಳಲ್ಲಿ 37 ನಾಕೌಟ್ಗಳೊಂದಿಗೆ 56 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಅಲಿ ಅವರು 2005ರಲ್ಲಿ ಅಮೇರಿಕಾದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ’ಪ್ರೆಸಿಡೆನ್ಷಿಯಲ್ ಮೆಡಲ್ ಆಫ್ ಫ್ರೀಡಮ್ ಹಾಗೂ 1998ರಲ್ಲಿ ವಿಶ್ವ ಸಂಸ್ಥೆಯ ಶಾಂತಿದೂತ ಎಂದು ಹೆಸರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.