ಮಂಗಳೂರು: ಎ. 30 ರಿಂದ ಮೇ 4 ರವರೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಲಿರುವ 19 ನೇ ಅಂತಾರಾಷ್ಟ್ರೀಯ ಫೆಡರೇಶನ್ ಕಪ್ ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಕ್ರೀಡಾ ಸಚಿವ ಅಭಯ್ ಚಂದ್ರ ಜೈನ್ ಅವರು ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಅವರು ‘ಈ ಕ್ರೀಡಾಕೂಟವು ಬೆಳಗ್ಗೆ ಮತ್ತು ಸಂಜೆ ಅಂತಾರಾಷ್ಟ್ರೀಯ ಗುಣಮಟ್ಟದ ಮಾದರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಉದ್ಘಾಟಿಸಲಿದ್ದಾರೆ. ಆಥ್ಲೇಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಜೆ. ಸುಮಾರಿವಾಲ ಅವರು ಧ್ವಜಾರೋಹಣ ನಡೆಸಲಿದ್ದಾರೆ ಎಂದರು.
ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ಎ.30 ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ನಾಲ್ಕು ದಿನ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ 23 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಜೂನ್ನಲ್ಲಿ ಚೀನಾದ ವೂಹಾನ್ನಲ್ಲಿ ನಡೆಯುವ ಏಶ್ಯನ್ ಆಥ್ಲೇಟಿಕ್ ಚಾಂಪಿಯನ್ಶಿಪ್ ಮತ್ತು ಆಗಸ್ಟ್ನಲ್ಲಿ ನಡೆಯುವ ರಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ಒಲಿಂಪಿಯನ್ ಪಿ.ಟಿ.ಉಷಾ ಅವರು ಈಗಾಗಲೇ ಆಥ್ಲೇಟ್ಗಳನ್ನು ತಯಾರಿಗೊಳಿಸುವ ನಿಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ವಿವಿಧ ಕ್ರೀಡಾಪಟುಗಳಿಗೆ ತರಬೇತಿ ನೀಡುತ್ತಿದ್ದಾರೆ. ಮಂಗಳೂರಿನಲ್ಲಿ ಈ ಕ್ರೀಡಾಕೂಟ ನಡೆಯುತ್ತಿರುವುದರಿಂದ ಈ ಭಾಗದ ಕ್ರೀಡಾಳುಗಳಲ್ಲಿ ಹಲವಾರು ನಿರೀಕ್ಷೆಗಳು ಚಿಗುರೊಡಿದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.