ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಅವರ ವಂಚನೆ ಪ್ರಕರಣ, ಅಗಸ್ಟಾವೆಸ್ಟ್ ಲ್ಯಾಂಡ್ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ಮಾಡುವ ಸಲುವಾಗಿ ಸಿಬಿಐ ಗುರುವಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ.
ಇತ್ತೀಚಿಗೆ ಭಾರೀ ಸುದ್ದಿ ಮಾಡಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಜಯ್ ಮಲ್ಯ ಮತ್ತು ಅಗಸ್ಟಾವೆಸ್ಟ್ ಲ್ಯಾಂಡ್ ಪ್ರಕರಣಗಳು ಅಗ್ರಮಾನ್ಯ ಸ್ಥಾನದಲ್ಲಿದೆ. ಇವುಗಳ ತನಿಖೆಯನ್ನು ಸಮರ್ಥವಾಗಿ ನಿಭಾಯಿಸಲು ಎಸ್ಐಟಿ ರಚನೆ ಮಾಡಲಾಗಿದೆ.
ಮಾಜಿ ವಾಯುಸೇನಾ ಮುಖ್ಯಸ್ಥ ಎಸ್ಪಿ ತ್ಯಾಗಿ ಅವರನ್ನು ಅಗಸ್ಟಾವೆಸ್ಟ್ ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ವಿಚಾರಣೆಗೆ ಒಳಪಡಿಸಿತ್ತು.
ಇಟಲಿ ಮೂಲದ ಸಂಸ್ಥೆಯಿಂದ ಅವರು ಒಪ್ಪಂದ ಕುದುರಿಸುವ ಸಲುವಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಅಲ್ಲದೇ ಅವರು ಈ ಸಂಬಂಧ ಫ್ಲೋರೆನ್ಸ್ , ಮಿಲನ್ ಮತ್ತು ವೆನ್ಸಿಯಾಗೂ ಭೇಟಿಕೊಟ್ಟಿದ್ದರು ಎಂದು ಸಿಬಿಐ ಮೂಲಗಳು ತಿಳಿಸಿವೆ. ಈ ಬಗ್ಗೆ ತನಿಖೆಯನ್ನೂ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.