ಮುಂಬಯಿ: ಪ್ರತಿ ತಿಂಗಳ 21ರಂದು ಯೋಗ ದಿನವನ್ನು ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಆಚರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರತಿ ತಿಂಗಳ ೨೧ರಂದು ಜಿಲ್ಲಾ ಮಟ್ಟದಲಲಿ ಯೋಗವನ್ನು ವಿವಿಧ ರೀತಿಯಲ್ಲಿ ಆಚರಿಸುವ ವಿಧಾನಗಳನ್ನು ತಿಳಿಸುವಂತೆ ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್, ಬಾಬಾ ರಾಮ್ದೇವ್ ಅವರ ಪತಂಜಲಿ ಯೋಗ ಸಮಿತಿ, ಸಮರ್ಥ ವ್ಯಾಯಾಮ ಮಂದಿರ ಭಾರತ್ ಸ್ವಾಭಿಮಾನ್ ನ್ಯಾಸ್ ಮತ್ತಿತರ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಹಾರಾಷ್ಟ್ರ ರಾಜ್ಯ ಶಾಲಾ ಮತ್ತು ಉನ್ನತ ಶಿಕ್ಷಣ ಸಚಿವ ವಿನೋದ್ ತಾವಡೆ ಮಾತುಕತೆ ನಡೆಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ’ಯೋಗ ಡೇ ಸಮಿತಿ’ ಸ್ಥಾಪಿಸಿ ಪ್ರತಿ ವರ್ಷ ಜನವರಿ 12-21ರ ವರೆಗೆ ಯೋಗ ಮಹೋತ್ಸವವನ್ನು ಆಚರಿಸಲಾಗುವುದು. ಜಿಲ್ಲಾ ಮಟ್ಟದ ಸಮಿತಿಗಳನ್ನು ಸಂಯೋಜಿಸಿ ಮೇಲ್ವಿಚಾರಣೆ ನಡೆಸಲು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು ವಿನೋದ್ ತಾವಡೆ ಹೇಳಿದ್ದಾರೆ.
ಆನವರಿ 12ರಂದು ಸ್ವಾಮಿ ವಿವೇಕಾನಂದ ಜನ್ಮದಿನವನ್ನು ದೇಶದೆಲ್ಲೆಡೆ ’ಯುವಕರ ದಿನ’ವಾಗಿ ಆಚರಿಸಲಾಗುತ್ತದೆ. ಅದರ ಜೊತೆಯಲ್ಲೇ ಜ.12-21ರ ವರೆಗೆ ಶಾಲಾ-ಕಾಲೇಜುಗಳು ಯೋಗ ದಿನವನ್ನು ಆಚರಿಸಲಿವೆ ಎಂದು ತಾವಡೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.