ನವದೆಹಲಿ: ಆಫ್ರಿಕಾ ರಾಷ್ಟ್ರಗಳೊಂದಿಗೆ ಸಂಬಂಧ ವರ್ಧಿಸುವ ನಿಟ್ಟಿನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂ. 12ರಂದು ಆಫ್ರಿಕಾದ ಮೂರು ರಾಷ್ಟ್ರಗಳಾದ ಘಾನಾ, ಕೋಟ್ ಡಿ ಐವರಿ ಹಾಗೂ ನಮೀಬಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆರು ದಿನಗಳ ಆಫ್ರಿಕಾ ಪ್ರವಾಸದಲ್ಲಿ ಮುಖರ್ಜಿ ಅವರ ಜೊತೆ ಓರ್ವ ರಾಜ್ಯ ಸಚಿವ, ನಾಲ್ವರು ಸಂಸತ್ ಸದಸ್ಯರು, ಹಿರಿಯ ಅಧಿಕಾರಿಗಳು ಜೊತೆಗಿರಲಿದ್ದಾರೆ.
ಮೊದಲ ಹಂತದಲ್ಲಿ ಮುಖರ್ಜಿ ಅವರು ಘಾನಾಕ್ಕೆ ತೆರಳಲಿದ್ದು, ರಿಪಬಿಕ್ ಆಫ್ ಘಾನಾದ ಉಪರಾಷ್ಟ್ರಪತಿ ಕ್ವೇಸಿ ಬೆಕೋ ಅಮ್ಮಿಸ್ಸಾ-ಆರ್ಥರ್ ಮುಖರ್ಜಿ ಅವರನ್ನು ಸ್ವಾಗತಿಸಲಿದ್ದಾರೆ. ಮೂರು ರಾಷ್ಟ್ರಗಳ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಲಿರುವ ಅವರು ಹಲವು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಘಾನಾ ವಿಶ್ವವಿದ್ಯಾಲಯದ ಜಂಟಿ ಉದ್ದಿಮೆಗಳ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಲಿರುವ ಮುಖರ್ಜಿ ಅವರು ಭಾರತೀಯ ವಿದ್ಯಾರ್ಥಿಗಳು ಭೇಟಿ ಮಾಡಲಿದ್ದಾರೆ. ಇದೇ ವೇಳೆ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ ಕೊಡುಗೆಯಾಗಿ ನೀಡಿದ ಮಹಾತ್ಮಾ ಗಾಂಧಿ ಅವರ ಮೂರ್ತಿಯನ್ನು ಅನಾವರಣ ಮಾಡಲಿದ್ದಾರೆ.
ಎರಡನೇ ಹಂತದಲ್ಲಿ ರಾಷ್ಟ್ರಪತಿ ಮುಖರ್ಜಿ ಅವರು ಜೂ.14ರಂದು ಕೋಟ್ ಡಿ ಐವರಿ ಹಾಗೂ ಜೂ.15ರಂದು ನಮೀಬಿಯಾಗೆ ತೆರಳಲಿದ್ದಾರೆ.
ಈ ಸಂದರ್ಭ ದ್ವಿಪಕ್ಷೀಯ, ಪ್ರಾದೇಶಿಕ, ಬಹುಪಕ್ಷೀಯ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.